
ವಿಜಯಪುರ (ದೇವನಹಳ್ಳಿ): ನಾಡಕಚೇರಿ ಆವರಣದಲ್ಲಿ ಸೋಮವಾರ ಗಣರಾಜ್ಯೋತ್ಸವವನ್ನು ಆಚರಿಸಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ಉಪತಹಶೀಲ್ದಾರ್ ಸುಜಿತ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತ ಸಂವಿಧಾನ ರಚಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ನಾವೆಲ್ಲರೂ ಜೀವನದಲ್ಲಿ ಸಂವಿಧಾನದ ಪೀಠಿಕೆಯ ಆಶಯ ಅರಿತು ಪಾಲನೆ ಮಾಡಬೇಕು ಎಂದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ರಾಷ್ಟ್ರದ ಏಕತೆಯನ್ನು ಕಾಪಾಡಲು ಸಂವಿಧಾನದ ಆಶಯಗಳನ್ನು ಪಾಲಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕಿದೆ ಎಂದರು.
ಕಂದಾಯ ನಿರೀಕ್ಷಕ ಶ್ರೀನಿವಾಸ್, ಗ್ರಾಮ ಆಡಳಿತ ಅಧಿಕಾರಿ ರವಿಕುಮಾರ್, ಜೀವನ್, ಮಾಲಾ, ಸಹಾಯಕ ಚಲಪತಿ, ನರಸಿಂಹಮೂರ್ತಿ, ದಿವ್ಯ, ಸತೀಶ್, ಶ್ರೀರಾಮ, ಚೈತ್ರ, ರವಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.