ADVERTISEMENT

‘ಹಾಲು ಉತ್ಪಾದಕರ ಹಿತ ಕಾಪಾಡಲು ಬದ್ಧ’

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2018, 19:20 IST
Last Updated 17 ಅಕ್ಟೋಬರ್ 2018, 19:20 IST
ಸಂಘದ ಬೆಳ್ಳಿ ಹಬ್ಬದ ಆಚರಣೆಯನ್ನು ಟಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸೊಣ್ಣಪ್ಪ ಉದ್ಘಾಟಿಸಿದರು.. ಒಕ್ಕೂಟದ ನಿರ್ದೇಶಕ ಸಿ.ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕಪ್ಪಯ್ಯಣ್ಣ, ಒಕ್ಕೂಟದ ಪ್ರಧಾನ ವ್ಯವಸ್ಥಾಪಕ ಡಾ.ಎನ್. ಕೃಷ್ಣಾರೆಡ್ಡಿ ಇದ್ದಾರೆ
ಸಂಘದ ಬೆಳ್ಳಿ ಹಬ್ಬದ ಆಚರಣೆಯನ್ನು ಟಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸೊಣ್ಣಪ್ಪ ಉದ್ಘಾಟಿಸಿದರು.. ಒಕ್ಕೂಟದ ನಿರ್ದೇಶಕ ಸಿ.ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕಪ್ಪಯ್ಯಣ್ಣ, ಒಕ್ಕೂಟದ ಪ್ರಧಾನ ವ್ಯವಸ್ಥಾಪಕ ಡಾ.ಎನ್. ಕೃಷ್ಣಾರೆಡ್ಡಿ ಇದ್ದಾರೆ   

ಹೊಸಕೋಟೆ: ಹಾಲು ಉತ್ಪಾದಕರ ಹಿತ ಕಾಪಾಡುವಲ್ಲಿ ಬೆಂಗಳೂರು ಹಾಲು ಒಕ್ಕೂಟ ಬದ್ಧವಾಗಿದ್ದು ಅವರಿಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಸಿ.ನಾಗರಾಜಯ್ಯ ಹೇಳಿದರು.

ತಾಲ್ಲೂಕಿನ ದೊಡ್ಡಹುಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಬೆಳ್ಳಿ ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಒಕ್ಕೂಟ ಅ.15ರಿಂದ ಉತ್ಪಾದ ಕರಿಗೆ ಪ್ರತಿ ಲೀಟರ್‌ ಹಾಲಿಗೆ ₹ 1 ಹೆಚ್ಚು ಕೊಡುತ್ತಿದೆ. ಹೊಸಕೋಟೆ ಬಳಿಯ ಶೀಥಲ ಸಂಗ್ರಹ ಕೇಂದ್ರವನ್ನು ಸುಮಾರು ₹ 30 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುವುದು’ ಎಂದರು.

ADVERTISEMENT

ಕ್ಕೂಟದ ನಿರ್ದೇಶಕ ಸಿ.ಮಂಜುನಾಥ್ ಮಾತನಾಡಿ, ‘ದೊಡ್ಡಹುಲ್ಲೂರು ಹಾಲು ಉತ್ಪಾದಕರ ಸಂಘ ಗಳಿಸಿದ ಲಾಭದಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆ. ಗ್ರಾಮಕ್ಕೆ ಬೇಕಾದ ಸಾಮಾಜಿಕ ಉಪಯುಕ್ತ ಚಟುವಟಿಕೆಗಳಿಗೆ ಹಣ ವಿನಿಯೋಗಿಸುವುದರ ಮೂಲಕ ಮಾದರಿ ಸಂಘವಾಗಿದೆ’ ಎಂದರು.

ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.