ADVERTISEMENT

ಹಿಂದೂ ಧರ್ಮ ಒಡೆಯಲು ಸಂಘಟಿತ ಯತ್ನ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 17:26 IST
Last Updated 13 ಸೆಪ್ಟೆಂಬರ್ 2025, 17:26 IST
ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್
ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್   

ಆನೇಕಲ್‌: ಹಿಂದೂ ಧರ್ಮವನ್ನು ಒಡೆಯುವ ಸಂಘಟಿತ ಪ್ರಯತ್ನ ಹಾಗೂ ಪಿತೂರಿ ರಾಜ್ಯದ ಹಲವೆಡೆ ನಡೆಯುತ್ತಿದೆ. ಕೋಮುಗಲಭೆ ಹಾಗೂ ಸಮಾಜ ವಿಭಜನೆ ಮಾಡುವ ಶಕ್ತಿಗಳಿಗೆ ರಾಜ್ಯ ಸರ್ಕಾರ ವೇದಿಕೆ ಕಲ್ಪಿಸುತ್ತಿದೆ ಎಂದು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ಆನೇಕಲ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ಗಣಪತಿ ಮೆರವಣಿಗೆಗೆ ಕಲ್ಲು ಹೊಡೆದವರು ವಿರುದ್ಧ ಕ್ರಮ ಕೈಗೊಳ್ಳದೇ ಸಾಮಾನ್ಯರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶ ವಿಗ್ರಹವನ್ನೇ ಪೊಲೀಸರು ತಮ್ಮ ವಾಹನದಲ್ಲಿ ಹೊತ್ತೊಯ್ದಿದ್ದರು. ಈ ವರ್ಷ ಮದ್ದೂರು, ಹಾಸನ, ಭದ್ರಾವತಿ ಸೇರಿದಂತೆ ಹಲವೆಡೆ ಗಣಪತಿ ಹಬ್ಬದ ಆಚರಣೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲಾಗಿದೆ ಎಂದು ದೂರಿದರು.

ರಾಜ್ಯದಲ್ಲಿರುವ ಆಡಳಿತ ಪಕ್ಷ ಸಮಾಜದಲ್ಲಿ ಶಾಂತಿ ಸ್ಥಾಪಿಸಲು ಆದ್ಯತೆ ನೀಡಬೇಕು. ಹಿಂದೂ ಸಮಾಜವನ್ನು ಒಡೆಯುವಂತಹ ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.