ADVERTISEMENT

ಸಂಘಟಿತ ಹೋರಾಟದಿಂದ ಸಮುದಾಯದ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2019, 14:09 IST
Last Updated 10 ಫೆಬ್ರುವರಿ 2019, 14:09 IST
ವಿಜಯಪುರ ಚನ್ನಕೇಶವ ಸ್ವಾಮಿ ದೇವಾಲಯದ ಆವರಣದಲ್ಲಿ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನ ಚುನಾವಣೆ ಹಿನ್ನೆಲೆಯಲ್ಲಿ ಮಹಾಸಭಾದ ಉಪಾಧ್ಯಕ್ಷ ಶಂಕರನಾರಾಯಣ ಮತಯಾಚನೆ ಮಾಡಿದರು
ವಿಜಯಪುರ ಚನ್ನಕೇಶವ ಸ್ವಾಮಿ ದೇವಾಲಯದ ಆವರಣದಲ್ಲಿ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನ ಚುನಾವಣೆ ಹಿನ್ನೆಲೆಯಲ್ಲಿ ಮಹಾಸಭಾದ ಉಪಾಧ್ಯಕ್ಷ ಶಂಕರನಾರಾಯಣ ಮತಯಾಚನೆ ಮಾಡಿದರು   

ವಿಜಯಪುರ: ಯಾವುದೇ ಸಮುದಾಯ ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಟಿತ ಹೋರಾಟ ಅಗತ್ಯ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಶಂಕರನಾರಾಯಣ ಹೇಳಿದರು.

ಮಹಾಸಭಾ ಅಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.

ಸಮುದಾಯದವರು ಒಳಜಗಳ ಬಿಟ್ಟು ಸಂಘಟಿತವಾಗಿ ಹೋರಾಟ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.

ADVERTISEMENT

ಗ್ರಾಮಾಂತರ ಜಿಲ್ಲಾ ಬಡಗನಾಡು ಬ್ರಾಹ್ಮಣ ಸಂಘದ ಉಪಾಧ್ಯಕ್ಷ ಹೊಸಕೋಟೆ ಮಂಜುನಾಥ ಮಾತನಾಡಿ, ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ವೆಂಕಟನಾರಾಯಣ ಅವರು ಸಂಘಟನೆಯಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ ಅವರನ್ನು ಬೆಂಬಲಿಸಬೇಕಾಗಿದೆ ಎಂದರು.

ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾದ ವಿಶ್ವನಾಥ್, ಮಂಜುನಾಥ್ ಶರ್ಮಾ, ದೇವನಹಳ್ಳಿ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅದ್ಯಕ್ಷ ದೇ.ಸೂ.ನಾಗರಾಜು, ಉಪಾಧ್ಯಕ್ಷ ದೀಕ್ಷಿತ್, ವಿಜಯಪುರ ಬ್ರಾಹ್ಮಣ ಸೇವಾ ಟ್ರಸ್ಟ್ ಅಧ್ಯಕ್ಷ ಮುರುಳಿ ಭಟ್ಟಾಚಾರ್ಯ, ಉಪಾದ್ಯಕ್ಷ ಎಚ್.ಆರ್.ಶೇಷಗಿರಿರಾವ್, ಎಸ್. ರವಿ, ಜಿ.ಸತೀಶಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.