ADVERTISEMENT

ದೊಡ್ಡಬಳ್ಳಾಪುರ: ಗ್ರಾಮೀಣ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ತರಬೇತಿ ಕೇಂದ್ರ ಆರಂಭ

​ಪ್ರಜಾವಾಣಿ ವಾರ್ತೆ
Published 9 ಮೇ 2025, 15:22 IST
Last Updated 9 ಮೇ 2025, 15:22 IST
ದೊಡ್ಡಬಳ್ಳಾಪುರ ಡೆಬೋರಾ ಫೌಂಡೇಷನ್‌ ಇಂಡಿಯಾ ಸಂಸ್ಥೆ ಕಂಪ್ಯೂಟರ್‌  ತರಬೇತಿ ಕೇಂದ್ರವನ್ನು ತಹಶೀಲ್ದಾರ್‌ ವಿಭಾವಿದ್ಯಾ ರಾಥೋಡ್‌ ಉದ್ಘಾಟಿಸಿದರು
ದೊಡ್ಡಬಳ್ಳಾಪುರ ಡೆಬೋರಾ ಫೌಂಡೇಷನ್‌ ಇಂಡಿಯಾ ಸಂಸ್ಥೆ ಕಂಪ್ಯೂಟರ್‌  ತರಬೇತಿ ಕೇಂದ್ರವನ್ನು ತಹಶೀಲ್ದಾರ್‌ ವಿಭಾವಿದ್ಯಾ ರಾಥೋಡ್‌ ಉದ್ಘಾಟಿಸಿದರು   

ದೊಡ್ಡಬಳ್ಳಾಪುರ: ಡೆಬೋರಾ ಫೌಂಡೇಶನ್‌ ಇಂಡಿಯಾ ಸಂಸ್ಥೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ ನೀಡುವ ನಿಟ್ಟಿನಲ್ಲಿ ಉಚಿತ ಕಂಪ್ಯೂಟರ್‌ ತರಬೇತಿ ಕೇಂದ್ರ ತೆರೆಯಲಾಗಿದೆ. ನಗರದ ಗಾಂಧಿನಗರ ಸಂಸ್ಥೆ ಕಚೇರಿಯಲ್ಲಿ ಕೇಂದ್ರವನ್ನು ತಾಲ್ಲೂಕು ತಹಶೀಲ್ದಾರ್‌ ವಿಭಾವಿದ್ಯಾ ರಾಥೋಡ್‌ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಸಿಕ್ಕರೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸಲಿದ್ದಾರೆ. ಈ ದಿಸೆಯಲ್ಲಿ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಕಂಟನಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ರಾಜಗೋಪಾಲ್‌, ಸೌಭಾಗ್ಯ ಸೇವಾ ಟ್ರಸ್ಟ್‌‌ ಅಧ್ಯಕ್ಷ ರಾಜಗೋಪಾಲ‌, ದಿಶಾ ಕಮಿಟಿ ಸದಸ್ಯೆ ವತ್ಸಲಾ, ಡೆಬೋರಾ ಸಂಸ್ಥೆ ಸಿಬ್ಬಂದಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.