ADVERTISEMENT

ಕೃಷಿ ಕಾಯ್ದೆ ಕೈಬಿಡಲು ಸರ್ಕಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 7:07 IST
Last Updated 12 ಡಿಸೆಂಬರ್ 2020, 7:07 IST

ವಿಜಯಪುರ: ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಪರವಾಗಿ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ದೇಶದ ಅನ್ನದಾತರಿಗೆ ಮರಣ ಶಾಸನ ಬರೆದಿದೆ ಎಂದು ಟೌನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅನ್ನದಾತರ ಪ್ರತಿಭಟನೆಯನ್ನು ಬಲಪ್ರಯೋಗದ ಮೂಲಕ‌ ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ದೆಹಲಿ ಚಲೋಗೆ ತೆರಳಿದ್ದ ರೈತರ ಮೇಲೆ ಲಾಠಿ ಚಾರ್ಜ್‌ ಮಾಡಲಾಗಿದೆ. ಕೂಡಲೇ ಪ್ರಧಾನಿ ರೈತರ ಕ್ಷಮೆ ಕೇಳಬೇಕು. ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT