ADVERTISEMENT

ದೇವನಹಳ್ಳಿ | ವಿದ್ಯಾರ್ಥಿನಿಲಯ ಹೊಸ ಕಟ್ಟಡ ಉದ್ಘಾಟನೆ ಇಂದು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 2:00 IST
Last Updated 22 ನವೆಂಬರ್ 2025, 2:00 IST

ದೇವನಹಳ್ಳಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಹೊಸ ಕಟ್ಟಡ ಉದ್ಘಾಟನೆ, ಮೆಟ್ರಿಕ್ ನಂತರದ ತಾಂತ್ರಿಕ ಮತ್ತು ವೈದ್ಯಕೀಯ ಬಾಲಕರ ವಿದ್ಯಾರ್ಥಿನಿಲಯದ ಹೊಸ ಕಟ್ಟಡ ಶಂಕುಸ್ಥಾಪನೆ ನ.22ರಂದು ಶನಿವಾರ ಬೆಳಗ್ಗೆ 11.30ಕ್ಕೆ ವಿಜಯಪುರ ರಸ್ತೆಯ ಜೈನ್ ಟೆಂಪಲ್ ಹಿಂಭಾಗ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಉದ್ಘಾಟನೆ ನೆರವೆರಿಸಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಸಂಸದ ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಶಾಸಕ ಎಸ್.ರವಿ, ಪುಟ್ಟಣ್ಣ, ಎಂಟಿಬಿ ನಾಗರಾಜ್, ರಾಮೋಜಿ ಗೌಡ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ವಿವಿಧ ಪ್ರಾಧಿಕಾರದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT