ADVERTISEMENT

ಕಾಂಗ್ರೆಸ್ ಕಾರ್ಯಕರ್ತರ ಸಭೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 7:00 IST
Last Updated 11 ಡಿಸೆಂಬರ್ 2020, 7:00 IST
ಚನ್ನರಾಯಪಟ್ಟಣ ಹೋಬಳಿಯ ಚನ್ನಹಳ್ಳಿ ಸಮೀಪದ ಮಾರಮ್ಮ ದೇವಾಲಯದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ರಾಮಚಂದ್ರಪ್ಪ ಮಾತನಾಡಿದರು
ಚನ್ನರಾಯಪಟ್ಟಣ ಹೋಬಳಿಯ ಚನ್ನಹಳ್ಳಿ ಸಮೀಪದ ಮಾರಮ್ಮ ದೇವಾಲಯದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ರಾಮಚಂದ್ರಪ್ಪ ಮಾತನಾಡಿದರು   

ವಿಜಯಪುರ: ‘ಪಂಚಾಯಿತಿಗಳಿಗೆ ಶಕ್ತಿ ತುಂಬಿಸಲು ಅಧಿಕಾರ ವಿಕೇಂದ್ರೀಕರಣ ಗೊಳಿಸಿದ್ದ ಮಾಜಿ ಪ್ರಧಾನಿ ದಿ.ರಾಜೀವ ಗಾಂಧಿ ಅವರ ಕನಸು ನನಸು ಮಾಡುವ ಹೊಣೆಗಾರಿಕೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ’ ಎಂದು ಕಾಂಗ್ರೆಸ್ ಮುಖಂಡ ಮುನಿನರಸಿಂಹಯ್ಯ ಹೇಳಿದರು.

ಚನ್ನರಾಯಪಟ್ಟಣ ಹೋಬಳಿಯ ಚನ್ನಹಳ್ಳಿ ಸಮೀಪದ ಮಾರಮ್ಮ ದೇವಾಲಯದ ಬಳಿ ಬುಧವಾರ ಬೆಟ್ಟಕೋಟೆ ಹಾಗೂ ಚನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್‌ನಿಂದ ಮಾತ್ರವೇ ಜಾತ್ಯತೀತ ತತ್ವ ಕಾಪಾಡಲಿಕ್ಕೆ ಸಾಧ್ಯ. ಕ್ಷೇತ್ರದಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷ ಸದೃಢವಾಗಿದೆ. ಈ ಬಾರಿ ಎಲ್ಲಾ ಪಂಚಾಯಿತಿಗಳನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆದುಕೊಳ್ಳಲು ಉತ್ತಮವಾದ ಅವಕಾಶವಿದೆ ಎಂದು ಹೇಳಿದರು.

ADVERTISEMENT

‌ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಮಾತನಾಡಿ‌ದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ರಾಮಚಂದ್ರಪ್ಪ, ಮುಖಂಡರಾದ ಕೆ. ವೆಂಕಟಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ. ಮಂಜುನಾಥ್, ಜಿ. ಲಕ್ಷ್ಮೀನಾರಾಯಣಪ್ಪ, ಪಿ. ಅನಂತಕುಮಾರಿ ಚಿನ್ನಪ್ಪ, ಲಕ್ಷ್ಮಣಗೌಡ, ಮುದುಗುರ್ಕಿ ನಾರಾಯಣಸ್ವಾಮಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಮ್ಮ ವೆಂಕಟೇಶ್, ಡೇವಿಡ್ ನಾರಾಯಣಸ್ವಾಮಿ, ರಾಜಣ್ಣ, ಭೈರೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.