ADVERTISEMENT

‘ಕೊಳೆಗೇರಿಯಲ್ಲಿ 500 ಮನೆಗಳ ನಿರ್ಮಾಣ’

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2019, 13:00 IST
Last Updated 7 ಮಾರ್ಚ್ 2019, 13:00 IST
ಹಕ್ಕುಪತ್ರಗಳನ್ನು ಶಾಸಕ ಟಿ.ವೆಂಕಟರಮಣಯ್ಯ ಫಲಾನುವಿಗಳಿಗೆ ವಿತರಿಸಿದರು
ಹಕ್ಕುಪತ್ರಗಳನ್ನು ಶಾಸಕ ಟಿ.ವೆಂಕಟರಮಣಯ್ಯ ಫಲಾನುವಿಗಳಿಗೆ ವಿತರಿಸಿದರು   

ದೊಡ್ಡಬಳ್ಳಾಪುರ: ನಗರದ ಕೊಳೆಗೇರಿ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ ಬಾಕಿ ಇದ್ದ ಹಕ್ಕುಪತ್ರ ವಿತರಿಸಲಾಗುತ್ತಿದೆ. ವಸತಿ ಯೋಜನೆಯಡಿಯಲ್ಲಿ ನಗರದ ಎರಡು ಕೊಳೆಗೇರಿಗಳಿಗೆ 500ಮನೆ ನಿರ್ಮಾಣ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ 100 ಫಲಾನುವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು.

ನಗರದ ವೀರಭದ್ರನಪಾಳ್ಯ ಹಾಗೂ ಕಚೇರಿಪಾಳ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಾಮಗಾರಿ ನಡೆಯುತ್ತಿದೆ. ಮನೆಗಳಿಗೆ ನಿರ್ಮಾಣಕ್ಕೆ 5.5ಲಕ್ಷ ಅನುದಾನ ನೀಡಲಾಗುತ್ತಿದ್ದು, ಫಲಾನುಭವಿಗಳು 10,000 ಪಾವತಿಸಬೇಕು. ಮೊದಲ ಕಂತು 5,000 ಕಟ್ಟಿದವರಿಗೆ ಮನೆ ನಿರ್ಮಿಸಿಕೊಡಲಾಗುವುದು. ವೀರಭದ್ರನಪಾಳ್ಯದಲ್ಲಿ 275 ಹಾಗೂ ಕಚೇರಿಪಾಳ್ಯದಲ್ಲಿ 225 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಗುಡಿಸಲು ಮುಕ್ತ ನಗರವಾಗಿಸಲು ವಸತಿ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ADVERTISEMENT

ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆ ಸ್ಥಾಪನೆಗೆ 10ಕೋಟಿ ಅನುದಾನ ಬಿಡುಗಡೆಯಾಗಿದೆ. ನೀರಿನ ಅಭಾವವಿರುವ ಇಂದಿನ ದಿನಗಳಲ್ಲಿ ಬಯಲುಸೀಮೆಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಪ್ರಗತಿಯಲ್ಲಿದ್ದು, ಯೋಜನೆ ಸ್ವರೂಪ ಪರಿಶೀಲಿಸಬಹುದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಎಂಜಿನಿಯರ್ ಚಂದ್ರಶೇಖರ್, ನಾಯ್ಕರ್, ಕಾಂಗ್ರೆಸ್ ಮುಖಂಡರಾದ ಡಿ.ವಿ.ಅಶ್ವತ್ಥಪ್ಪ, ಮುನಿರಾಜು, ಜವಾಜಿ ರಾಜೇಶ್, ಕೇಬಲ್ ರಾಜು, ಮಹದೇವ್, ಕೃಷ್ಣಪ್ಪ, ಕೇಶವ ನಾಯಕ್, ಪರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.