ADVERTISEMENT

ಕುಕ್ಕರ್ ಸಿಡಿದು ಗಾಯ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 4:32 IST
Last Updated 16 ಸೆಪ್ಟೆಂಬರ್ 2020, 4:32 IST
ಕುಕ್ಕರ್ ಸಿಡಿದು ಗಾಯಗೊಂಡಿರುವ ಕಿಶೋರ್
ಕುಕ್ಕರ್ ಸಿಡಿದು ಗಾಯಗೊಂಡಿರುವ ಕಿಶೋರ್   

ದೊಡ್ಡಬಳ್ಳಾಪುರ: ನಗರದ ಸೋಮೇಶ್ವರ ಬಡಾವಣೆಯಲ್ಲಿ ನಗರಸಭೆ ವತಿಯಿಂದ ನಡೆಸಲಾಗುತ್ತಿರುವ ನಿರಾಶ್ರಿತರ ಕೇಂದ್ರದಲ್ಲಿ ಅಡುಗೆ ಮಾಡುವ ವೇಳೆ ಕುಕ್ಕರ್ ಸಿಡಿದು ಕಿಶೋರ್ ಎಂಬಾತನ ಮುಖ ಹಾಗೂ ಕಣ್ಣಿಗೆ ತೀವ್ರ ಗಾಯವಾಗಿವೆ.

ನಿರಾಶ್ರಿತರ ಕೇಂದ್ರದಲ್ಲಿ 15ಕ್ಕೂ ಹೆಚ್ಚು ಮಂದಿ ಆಶ್ರಯ ಪಡೆದಿದ್ದಾರೆ. ಇಲ್ಲಿ ಅಡುಗೆ ಸಿಬ್ಬಂದಿ ಕೊರತೆಯಿರುವುದರಿಂದ ಕೇಂದ್ರದಲ್ಲಿ ಉಳಿದುಕೊಂಡಿರುವವರೇ ನಿತ್ಯ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ರಾತ್ರಿ ಘಟನೆ ನಡೆದಿದ್ದರೂ ಯಾರೂ ಕೂಡ ಆಸ್ಪತ್ರೆಗೆ ದಾಖಲು ಮಾಡಿರಲಿಲ್ಲ. ಬೆಳಿಗ್ಗೆ ಸಾರ್ವಜನಿಕರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT