ADVERTISEMENT

ಆನೇಕಲ್ ತಾಲ್ಲೂಕಿನಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 7:08 IST
Last Updated 20 ಜೂನ್ 2020, 7:08 IST
   

ಆನೇಕಲ್: ತಾಲ್ಲೂಕಿನಲ್ಲಿ ಶುಕ್ರವಾರ ಐದು ಕೊರೊನಾ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ ಎಂದು ತಹಶೀಲ್ದಾರ್‌ ಸಿ.ಮಹಾದೇವಯ್ಯ ತಿಳಿಸಿದ್ದಾರೆ.

ಮಂಟಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಟಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಾವಣೆವೊಂದರಲ್ಲಿ 10 ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಒಂದು ವಾರದ ಹಿಂದೆ ಬೆಂಗಳೂರಿನ ಸಂಬಂಧಿಕರ ಮನೆಗೆ ಮಗು ತೆರಳಿತ್ತು. ಆ ಮನೆಯಲ್ಲಿ ಮೂರು ಜನರಿಗೆ ಕೊರೊನಾ ಸೋಂಕು ಬಂದಿದೆ. ಮಗು ಅಲ್ಲಿಂದ ಬಂದ ನಂತರ ಮಗುವಿಗೂ ಸೋಂಕು ದೃಢಪಟ್ಟಿದೆ.

ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 100 ಮೀಟರ್‌ ವ್ಯಾಪ್ತಿಯ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಮಂಟಪ ಪಂಚಾಯಿತಿ ವ್ಯಾಪ್ತಿಯ ಕೆಲವು ಭಾಗ ಮತ್ತು ಬನ್ನೇರುಘಟ್ಟ ಗ್ರಾಮ ಪಂಚಾಯಿತಿಯ ಕೆಲವು ಭಾಗವನ್ನು ಸೀಲ್‌ಡೌನ್‌ ಮಾಡಲಾಗಿದೆ. ಇಲ್ಲಿಯ ಕುಟುಂಬಗಳಿಗೆ ಅವಶ್ಯಕ ಸಾಮಗ್ರಿಗಳನ್ನು ಪೂರೈಸಲಾಗುವುದು ಎಂದು ತಿಳಿಸಿದರು.

ADVERTISEMENT

ಶಾಂತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೂಡಸಂದ್ರ, ಬೊಮ್ಮಸಂದ್ರ, ಹೆಬ್ಬಗೋಡಿ ಮತ್ತು ಚಂದಾಪುರದ ಹೆಡ್‌ಮಾಸ್ಟರ್‌ ಲೇಔಟ್‌ಗಳಲ್ಲಿ ಒಂದೊಂದು ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದ್ದು ಇಲ್ಲಿಯೂ ಸೀಲ್‌ಡೌನ್‌ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಶೀಲ್ದಾರ್‌ ಸಿ.ಮಹಾದೇವಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.