ADVERTISEMENT

ಕೊರೊನಾ ಶೂನ್ಯ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 3:57 IST
Last Updated 23 ಸೆಪ್ಟೆಂಬರ್ 2021, 3:57 IST

ಹೊಸಕೋಟೆ: ತಾಲ್ಲೂಕಿನಲ್ಲಿ ಹಲವು ತಿಂಗಳ ನಂತರ ಕೊರೊನಾ ಸೋಂಕಿನ ಪ್ರಕರಣ ಬುಧವಾರ ಶೂನ್ಯ ದಾಖಲಾಗಿದೆ.

ಕೊರೊನಾ ಎರಡನೇ ಅಲೆ ವ್ಯಾಪಕವಾಗಿದ್ದ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಪ್ರತಿನಿತ್ಯ 500 ಪ್ರಕರಣ ದಾಖಲಾಗುತ್ತಿದ್ದವು. ಇತ್ತೀಚಿನ ದಿನಗಳಲ್ಲಿ ಪಾಸಿಟಿವ್ ಪ್ರಕರಣ ಕಡಿಮೆಯಾಗುವುದರಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ತಾಲ್ಲೂಕು ಆರೋಗ್ಯ ಇಲಾಖೆ ಧನ್ಯವಾದ ಅರ್ಪಿಸಿದೆ.

ಇದೇ ರೀತಿಯ ವಾತಾವರಣ ಮುಂದುವರಿಯಲು ಜನತೆ ಸಹಕರಿಸಬೇಕು. ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೋರಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.