ADVERTISEMENT

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರಿಂದ ಕೊರೊನಾ ಜಾಗೃತಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 10:09 IST
Last Updated 7 ಜೂನ್ 2020, 10:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ: ‘ಕೊರೊನಾ ನಿಯಂತ್ರಣ ಸಲುವಾಗಿ ಪ್ರತಿಯೊಬ್ಬ ನಾಗರಿಕರು ಜವಾಬ್ದಾರಿಯಿಂದ ವರ್ತನೆ ಮಾಡುವುದರ ಜೊತೆಗೆ, ಸುರಕ್ಷತಾ ಕ್ರಮ ಕೈಗೊಳ್ಳಬೇಕು’ ಎಂದು ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸಿದರು.

ಇಲ್ಲಿನ ಪ್ರಮುಖ ಬೀದಿಗಳಲ್ಲಿ ಶುಕ್ರವಾರ ಸಂಜೆ ಪಥಸಂಚಲನ ನಡೆಸಿದ ಪೊಲೀಸರು, ಧ್ವನಿವರ್ಧಕದ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು.

‘ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಬೇಕು. ಸ್ಯಾನಿಟೈಸರ್ ಬಳಕೆ ಮಾಡಬೇಕು. ಅಂತರ ಕಾಪಾಡಿಕೊಳ್ಳಬೇಕು. ಸರ್ಕಾರ ವಿಧಿಸಿರುವ ಎಲ್ಲಾ ನಿರ್ಬಂಧಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಸ್ಪಂದಿಸಬೇಕು. ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದರು.

ADVERTISEMENT

ಪೊಲೀಸ್ ಠಾಣೆಯ ಆವರಣದಿಂದ ಚನ್ನರಾಯಪಟ್ಟಣ ಸರ್ಕಲ್ ಮೂಲಕ ಗುರಪ್ಪನಮಠದ ರಸ್ತೆಯ ಜಿ.ಎಂ.ಸರ್ಕಲ್‌ನಿಂದ ಬಸ್ ನಿಲ್ದಾಣದ ಮಾರ್ಗದ ಮೂಲಕ ಸಂಚರಿಸಿದರು. ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ ಪಿ ಟಿ.ರಂಗಪ್ಪ, ಸರ್ಕಲ್ ಇನ್ ಸ್ಪೆಕ್ಟರ್ ಎಸ್.ಮಲ್ಲಿಕಾರ್ಜುನ್, ಸಬ್ ಇನ್ ಸ್ಪೆಕ್ಟರ್ ಡಿ.ಮಂಜುನಾಥ್, ಕಾನ್‌ಸ್ಟೆಬಲ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.