ADVERTISEMENT

ದೊಡ್ಡಬಳ್ಳಾಪುರ | ಚೈತನ್ಯನಗರಕ್ಕೆ ಕಾಲಿಟ್ಟ ಕೊರೊನಾ ವೈರಸ್

ಸ್ಥಳೀಯರಲ್ಲಿ ಆತಂಕ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 1:43 IST
Last Updated 27 ಜೂನ್ 2020, 1:43 IST
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.   

ದೊಡ್ಡಬಳ್ಳಾಪುರ: ನಗರ ಸಭೆ ವ್ಯಾಪ್ತಿಯ ಚೈತನ್ಯನಗರದ 4ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ಮೂರು ಜನರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ಧೃಡಪಟ್ಟಿದೆ.

ಸುಮಾರು 60 ವರ್ಷದ ಮಹಿಳೆಯೊಬ್ಬರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ ಬೆಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಕುಟುಂಬದವರು ಆಸ್ಪತ್ರೆಗೆ ಹೋಗಿ ಬಂದಿದ್ದರು. ಆಸ್ಪತ್ರೆಯಲ್ಲಿ ಸೋಂಕು ಹರಡಿರಬಹುದು ಎಂದು ಶಂಕಿಸಲಾಗಿದೆ.

ಸದ್ಯ ಸೋಂಕಿತ ಮೂರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಇತರರನ್ನು ಕ್ವಾರಂಟೈನ್ ಮಾಡಲಾಗಿದೆ. ಚೈತನ್ಯ ನಗರದ 2ನೇ ಕ್ರಾಸ್‌ನಿಂದ 7ನೇ ಕ್ರಾಸ್‌ವರೆಗಿನ ರಸ್ತೆಯನ್ನು ಶುಕ್ರವಾರ ರಾತ್ರಿಯಿಂದಲೇ ಸೀಲ್‌ಡೌನ್ ಮಾಡಲಾಗಿದೆ.

ADVERTISEMENT

ದೊಡ್ಡಬಳ್ಳಾಪುರ ನಗರದಲ್ಲಿ ಕೋವಿಡ್ -19 ಇದೇ ಪ್ರಥಮ ಪ್ರಕರಣವಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.