ADVERTISEMENT

ನಕಲಿ ನೋಟು ಚಲಾವಣೆ: ಬಂಧನ

​ಪ್ರಜಾವಾಣಿ ವಾರ್ತೆ
Published 14 ಜನವರಿ 2021, 2:58 IST
Last Updated 14 ಜನವರಿ 2021, 2:58 IST

ಆನೇಕಲ್ : ತಾಲ್ಲೂಕಿನ ಚಂದಾಪುರದಲ್ಲಿ ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಚಂದಾಪುರ ಸೂರ್ಯಸಿಟಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 5,450 ರೂಪಾಯಿ ಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ತಮಿಳುನಾಡಿನ ಅಂದವಾಡಿಯ ಸುರೇಶ್‌ (43) ಮತ್ತು ನರೇಶ್‌(25) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 200, 100 ಮತ್ತು 50 ರೂಪಾಯಿ ಮುಖಬೆಲೆಯ ನಕಲಿ ನೋಟುಗಳಿದ್ದವು. ಆರೋಪಿಗಳು ನೋಟುಗಳ ಕಲರ್‌ ಜೆರಾಕ್ಸ್‌ ಪಡೆದು ಚಂದಾಪುರ ಸಂತೆಯಲ್ಲಿ ಚಲಾವಣೆ ಮಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಸೂರ್ಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.