ADVERTISEMENT

14ಕ್ಕೆ ಮತ ಎಣಿಕೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2021, 1:59 IST
Last Updated 11 ಡಿಸೆಂಬರ್ 2021, 1:59 IST
ದೊಡ್ಡಬಳ್ಳಾಪುರದ ನಗರಸಭೆ ಮತಗಟ್ಟೆಯಲ್ಲಿ ಶಾಸಕ ಟಿ. ವೆಂಕಟರಮಣಯ್ಯ ಮತ ಚಲಾಯಿಸಿದರು
ದೊಡ್ಡಬಳ್ಳಾಪುರದ ನಗರಸಭೆ ಮತಗಟ್ಟೆಯಲ್ಲಿ ಶಾಸಕ ಟಿ. ವೆಂಕಟರಮಣಯ್ಯ ಮತ ಚಲಾಯಿಸಿದರು   

ದೊಡ್ಡಬಳ್ಳಾಪುರ:ವಿಧಾನ ಪರಿಷತ್‌ಗೆ ನಡೆದ ಚುನಾವಣೆ ಶಾಂತಿಯುತವಾಗಿದ್ದು, ತಾಲ್ಲೂಕಿನಲ್ಲಿ ಶೇ 100ರಷ್ಟು ಮತದಾನವಾಗಿದೆ.

ತಾಲ್ಲೂಕಿನಲ್ಲಿ 250 ಪುರುಷರು ಮತ್ತು 265 ಮಹಿಳಾ ಮತದಾರರು ಸೇರಿದಂತೆ ಒಟ್ಟು 515 ಮತದಾರರಿದ್ದು, ಎಲ್ಲರೂ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಳಿಗ್ಗೆ 8ಗಂಟೆಗೆ ಮತದಾನ ಆರಂಭವಾದರೂ 10ಗಂಟೆ ವೇಳೆಗೆ ಶೇ 2ರಷ್ಟು ಮಾತ್ರ ಮತದಾನವಾಗಿತ್ತು. ಮಧ್ಯಾಹ್ನ 2ಗಂಟೆ ವೇಳೆಗೆ ಶೇ 72ರಷ್ಟು ಮತದಾನವಾಗಿತ್ತು.

ಶಾಸಕ ಟಿ. ವೆಂಕಟರಮಣಯ್ಯ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ADVERTISEMENT

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 28 ಮತಗಟ್ಟೆ ಸ್ಥಾಪಿಸಲಾಗಿತ್ತು. ಆಯಾ ಗ್ರಾಮ ಪಂಚಾಯಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಯಾಲಯಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಡಿ ಮಸ್ಟರಿಂಗ್ ಕಾರ್ಯವು ತಾಲ್ಲೂಕು ಆಡಳಿತ ಸೌಧದಲ್ಲಿ
ನಡೆಯಿತು.

ತಹಶೀಲ್ದಾರ್ ಟಿ.ಎಸ್. ಶಿವರಾಜು ಹಾಗೂ ಚುನಾವಣಾ ಸಿಬ್ಬಂದಿ ಹಾಜರಿದ್ದರು. ಡಿ. 14ರಂದು ದೇವನಹಳ್ಳಿಯ ಆಕಾಶ್ ಇಂಟರ್‌ ನ್ಯಾಷನಲ್ ಶಾಲೆಯಲ್ಲಿ ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕು ಸೇರಿದಂತೆ ಕ್ಷೇತ್ರದ 8 ತಾಲ್ಲೂಕುಗಳ ಮತ ಎಣಿಕೆ ಕಾರ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.