ADVERTISEMENT

ಕೊರೊನಾ ನಿಯಂತ್ರಣಕ್ಕೆ ಟಾಸ್ಕ್‌ಪೋರ್ಸ್ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 6 ಮೇ 2021, 3:45 IST
Last Updated 6 ಮೇ 2021, 3:45 IST
ಚನ್ನರಾಯಪಟ್ಟಣ ಹೋಬಳಿ ಗಂಗವಾರ-ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಯಿತು
ಚನ್ನರಾಯಪಟ್ಟಣ ಹೋಬಳಿ ಗಂಗವಾರ-ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಯಿತು   

ದೇವನಹಳ್ಳಿ/ವಿಜಯಪುರ: ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಿದಾಗ ಹಳ್ಳಿಗಳಲ್ಲಿ ಕೊರೊನಾ ಸೋಂಕು ನಿಯಂತ್ರಣ ಸಾಧ್ಯ ಎಂದು ಗಂಗವಾರ-ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ವೈ.ಶ್ರೀನಿವಾಸ್ ಹೇಳಿದರು.

ಚನ್ನರಾಯಪಟ್ಟಣ ಹೋಬಳಿ ಗಂಗವಾರ-ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.

ಸಮಿತಿಯ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಯಾರಿಗೆಲ್ಲ ಸೋಂಕಿನ ಲಕ್ಷಣಗಳಿವೆ ಎನ್ನುವುದನ್ನು ಗುರುತಿಸಿ, ಆರೋಗ್ಯ ತಪಾಸಣೆ ಮಾಡಿಸಿ, ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದರು.

ADVERTISEMENT

ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.