ADVERTISEMENT

‘ಕೋವಿಡ್ ನಿಯಂತ್ರಣ: ಸರ್ಕಾರ ವಿಫಲ’

​ಪ್ರಜಾವಾಣಿ ವಾರ್ತೆ
Published 20 ಮೇ 2021, 3:50 IST
Last Updated 20 ಮೇ 2021, 3:50 IST
ದೇವನಹಳ್ಳಿ ತಾಲ್ಲೂಕು ಕುಂದಾಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ಆರೋಗ್ಯ ಪರಿಕರಗಳನ್ನು ಕೆ.ಆರ್.ನಾಗೇಶ್ ವಿತರಿಸಿದರು
ದೇವನಹಳ್ಳಿ ತಾಲ್ಲೂಕು ಕುಂದಾಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ಆರೋಗ್ಯ ಪರಿಕರಗಳನ್ನು ಕೆ.ಆರ್.ನಾಗೇಶ್ ವಿತರಿಸಿದರು   

ದೇವನಹಳ್ಳಿ/ವಿಜಯಪುರ: ‘ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿ ವಿಫಲವಾಗಿದೆ. ರಾಜ್ಯದ ಜನರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಅಣಿಯಾಗಿ ನಿಂತಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ರಕ್ಷಣೆಗೆ ಪಣ ತೊಟ್ಟಿದ್ದೇವೆ’ ಎಂದು ಜಿಲ್ಲಾ ಕಾಂಗ್ರೆಸ್ ಯುವ ಘಟಕದಅಧ್ಯಕ್ಷ ಕೆ.ಆರ್.ನಾಗೇಶ್ ಹೇಳಿದರು.

ತಾಲ್ಲೂಕಿನ ಕುಂದಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ಒಂದು ಸಾವಿರ ಮಾಸ್ಕ್ ಹಾಗೂ ಅಗತ್ಯ ಔಷಧಗಳನ್ನು ವೈದ್ಯರಿಗೆ ಹಸ್ತಾಂತರಿಸಿ ಮಾತನಾಡಿದರು.

ಕೋವಿಡ್ ಸೋಂಕು ಗಂಭೀರ ಸ್ವರೂಪ ಪಡೆದುಕೊಂಡಿರುವ ಕಾರಣದಿಂದ ಅಷ್ಟಾಗಿ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದೆ ಬರುತ್ತಿಲ್ಲ. ಮುಂದೆ ನಿಂತು ಜನರ ಕಷ್ಟಗಳನ್ನು ಆಲಿಸಬೇಕಾಗಿದ್ದ ಸರ್ಕಾರ, ನಿಷ್ಕ್ರೀಯವಾಗಿದೆ ಎಂದರು.

ADVERTISEMENT

ಕೊರೊನಾ 2ನೇ ಅಲೆಯಿಂದ ವೈದ್ಯರು, ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು, ಶ್ರಮಿಕರಿಗೆ ಸರ್ಕಾರ ₹10 ಸಾವಿರ ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಕ್ಷೇತ್ರದಲ್ಲಿ ಜನರಿಗೆ ಅಗತ್ಯವಾಗಿರುವ ರಕ್ಷಣಾ ಸಾಮಗ್ರಿಗಳ ಜತೆಗೆ ಉಚಿತ ಆಂಬುಲೆನ್ಸ್ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು.

ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.