ADVERTISEMENT

ಆನೇಕಲ್‌: ವ್ಯಕ್ತಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 15:18 IST
Last Updated 16 ಜೂನ್ 2020, 15:18 IST

ಆನೇಕಲ್: ತಾಲ್ಲೂಕಿನ ಸೋಂಪುರ ಸಮೀಪದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದ 49 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ದೊಮ್ಮಸಂದ್ರ ಸಮೀಪದ ಸೂಪರ್‌ ಮಾರ್ಕೆಟ್‌ನಮಾಲೀಕರಾಗಿದ್ದ ಇವರು ಜ್ವರ ಬಂದ ಹಿನ್ನೆಲೆಯಲ್ಲಿ ವರ್ತೂರು ರಸ್ತೆಯ ಕೊಲಂಬಿಯಾ ಆಸ್ಪತ್ರೆಗೆ ದಾಖಲಾಗಿದ್ದರು.

‘ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಪರಿಶೀಲಿಸಲಾಗುತ್ತಿದೆ.ಅಪಾರ್ಟ್‌ಮೆಂಟ್‌ನ ಒಂದು ಭಾಗವನ್ನು ಸೀಲ್‌ಡೌನ್‌ ಮಾಡಲಾಗಿದ್ದು ತಾಲ್ಲೂಕು ಆಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ’ ಎಂದು ತಹಶೀಲ್ದಾರ್‌ ಸಿ.ಮಹಾದೇವಯ್ಯ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.