ADVERTISEMENT

ಟೊಮೆಟೊಗೆ ಬೆಳೆ ವಿಮೆ: ರೈತರಿಂದ ಅರ್ಜಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 5:37 IST
Last Updated 17 ಜೂನ್ 2021, 5:37 IST
.
.   

ದೇವನಹಳ್ಳಿ: ಪ್ರಸಕ್ತಸಾಲಿನ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳೆದ ಟೊಮೆಟೊ ಬೆಳೆಗೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಮತ್ತು ವಿಜಯಪುರ ಹೋಬಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಮತ್ತು ತೂಬಗೆರೆ ಹೋಬಳಿ, ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ, ಜಡಿಗೇನಹಳ್ಳಿ ಮತ್ತು ನಂದಗುಡಿ ಹೋಬಳಿ, ನೆಲಮಂಗಲ ತಾಲ್ಲೂಕಿನ ಕಸಬಾ ಹೋಬಳಿಯ ಟೊಮೆಟೊ ಬೆಳೆಯನ್ನು ಬೆಳೆ ವಿಮೆ ಯೋಜನೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ ತಿಳಿಸಿದ್ದಾರೆ.

ಆಯಾ ತಾಲ್ಲೂಕಿನ ಹೋಬಳಿಯಲ್ಲಿ ಟೊಮೆಟೊ ಬೆಳೆಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರದೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕ್‌ಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ.

ADVERTISEMENT

ಈ ಯೋಜನೆಯಲ್ಲಿ ಸಾಲ ಪಡೆದ ರೈತರು ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಿಕೊಳ್ಳಲು ಇಚ್ಛಿಸದೇ ಇದ್ದಲ್ಲಿ ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ ಏಳು ದಿನ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಬೇಕು. ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ. ಟೊಮೆಟೊ ಬೆಳೆಗೆ ಪ್ರತಿ ಹೆಕ್ಟೇರ್‌ಗೆ ₹ 1.18 ಲಕ್ಷ ವಿಮಾ ಮೊತ್ತವಿದೆ. ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇ 5 ಅಂದರೆ ₹ 5,900 ಆಗಿದೆ. ವಿಮಾ ಕಂತು ನೋಂದಾಯಿಸಿಕೊಳ್ಳಲು ಜುಲೈ 15 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆದೇವನಹಳ್ಳಿ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ(ಜಿ.ಪಂ) ಪಿ. ಮಂಜುಳಾ(ಮೊ. 94488 25101),‌ ತಾಂತ್ರಿಕ ಸಹಾಯಕ ಉಮಾಪತಿ ಎಚ್.ಜಿ.(ಮೊ. 96061 17615), ದೊಡ್ಡಬಳ್ಳಾಪುರ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿ.ಪಂ) ಶ್ರೀನಿವಾಸ್ ಎಂ. (ಮೊ. 96324 10677),‌ ತಾಂತ್ರಿಕ ಸಹಾಯಕ ಮಾರುತಿ (ಮೊ. 97418 95988), ಹೊಸಕೋಟೆ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿ.ಪಂ) ಪ್ರಶಾಂತ್ ಆರ್. (ಮೊ. 95389 53949), ತಾಂತ್ರಿಕ ಸಹಾಯಕ ಸೋಮಶೇಖರ್ (ಮೊ. 84539 66868), ನೆಲಮಂಗಲ‌ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿ.ಪಂ) ಸುಬ್ರಮಣ್ಯ ಜೆ.ವಿ. (ಮೊ. 99017 54339), ತಾಂತ್ರಿಕ ಸಹಾಯಕ ವಿಜಯಕುಮಾರ್ (ಮೊ. 99025 81832) ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.