ADVERTISEMENT

ಬೆಳೆ ಸಮೀಕ್ಷೆ ಆಕ್ಷೇಪಣೆಗೆ ಅ.30 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 1:43 IST
Last Updated 30 ಅಕ್ಟೋಬರ್ 2025, 1:43 IST
<div class="paragraphs"><p>ಬೆಳೆ</p></div>

ಬೆಳೆ

   

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿಪಿಎಸ್‌ ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸಲಾಗುತ್ತಿದೆ. ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯನ್ನು ಮೇಲ್ವಿಚಾರಕರ ಮೂಲಕ ಅನುಮೋದನೆ ಮಾಡಿದ ನಂತರ ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿ, ಬೆಳೆ ವಿಮೆ ಯೋಜನೆ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಹಾಗೂ ಇತರೆ ಸೌಲಭ್ಯ ಪಡೆಯಲು ರೈತರಿಗೆ ಅಗತ್ಯ ಎಂದು ಕೃಷಿ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಪಿ.ರಾಘವೇಂದ್ರ ಹೇಳಿದ್ದಾರೆ.

ತಾಲ್ಲೂಕಿನ ಪ್ರತಿ ಗ್ರಾಮಗಳಿಗೆ ಖಾಸಗಿ ನಿವಾಸಿಗಳನ್ನು ಹಾಗೂ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ರೈತರ ಜಮೀನುಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಆ್ಯಪ್ ಮೂಲಕ ಬೆಳೆಗಳ ಛಾಯಾಚಿತ್ರ ಸೆರೆಹಿಡಿದು ಸಮೀಕ್ಷೆ ಕೈಗೊಂಡಿದ್ದಾರೆ. ಇದುವರೆಗೂ ಶೇ 93.95 ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಖಾಸಗಿ ನಿವಾಸಿಗಳು ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಸೆರೆ ಹಿಡಿದ ಮಾಹಿತಿಯನ್ನು ರೈತರು ಬೆಳೆ ದರ್ಶಕ್ 2025-26 ಎಂಬ ಆ್ಯಪ್‌ನಲ್ಲಿ ಸರ್ವೆ ನಂಬರ್‌ ವಾರು ಪರಿಶೀಲಿಸಬಹುದು.

ADVERTISEMENT

ಮಾಹಿತಿ ತಪ್ಪಾಗಿದ್ದಲ್ಲಿ ಆ್ಯಪ್‌ನಲ್ಲಿ ಅಕ್ಟೋಬರ್‌ 30ರ ಒಳಗೆ ಆಕ್ಷೇಪಣೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಯಾ ಗ್ರಾಮದ ಖಾಸಗಿ ನಿವಾಸಿ ಮೇಲ್ವಿಚಾರಕರು, ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.