ADVERTISEMENT

ಆನ್‌ಲೈನ್ ಆಮಿಷಗಳಿಗೆ ಬಲಿಯಾಗದಿರಿ: ZP ಉಪಕಾರ್ಯದರ್ಶಿ ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 8:36 IST
Last Updated 11 ಫೆಬ್ರುವರಿ 2026, 8:36 IST
ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್ ಮಾತನಾಡಿದರು
ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್ ಮಾತನಾಡಿದರು   

ದೇವನಹಳ್ಳಿ: ಅಂತರ್ಜಾಲ ದೈನಂದಿನ ಜೀವನದ ಅವಿಭಾಜ್ಯ ಅಂಗ. ಅದರಷ್ಟೇ ಅಪಾಯಗಳೂ ಇವೆ. ಆನ್‌ಲೈನ್‌ನಲ್ಲಿ ಕಾಣುವ ಆಸೆ-ಆಮಿಷಗಳಿಗೆ ಬಲಿಯಾಗದೆ ಎಚ್ಚರಿಕೆಯಿಂದ ಬಳಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್ ಹೇಳಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ವಂಚನೆ, ಸೈಬರ್ ಅಪರಾಧ, ಬ್ಲ್ಯಾಕ್‌ಮೇಲ್, ಆನ್‌ಲೈನ್ ಆಟದ ಚಟಗಳು ಹೆಚ್ಚಾಗುತ್ತಿದೆ. ಯುವಜನತೆ ಸುಲಭವಾಗಿ ಮೋಸಕ್ಕೆ ಒಳಗಾಗುತ್ತಿದೆ. ಸಾಮಾಜಿಕ ಜಾಲತಾಣಗಳ ರೀಲ್ಸ್ ವೀಕ್ಷಣೆಯಿಂದ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ. ಅಂತರ್ಜಾಲವನ್ನು ವೃತ್ತಿ ಹಾಗೂ ವೈಯಕ್ತಿಕ ಅಗತ್ಯಗಳಿಗೆ ಸೀಮಿತವಾಗಿ ಜವಾಬ್ದಾರಿಯಿಂದ ಬಳಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಸ್ಮಾರ್ಟ್ ತಂತ್ರಜ್ಞಾನ– ಸುರಕ್ಷಿತ ಆಯ್ಕೆಗಳು, ಎಐಯ ಸುರಕ್ಷಿತ ಹಾಗೂ ಜವಾಬ್ದಾರಿಯುತ ಬಳಕೆ ಎಂಬ ವಿಷಯದಡಿ ಮಾತನಾಡಿದ ಅವರು, ಅಂತರ್ಜಾಲ ಬಳಕೆ ಹೆಚ್ಚುತ್ತಿರುವಂತೆ ಸೈಬರ್ ಅಪಾಯಗಳು ಮತ್ತು ವಂಚನೆಗಳೂ ಹೆಚ್ಚುತ್ತಿವೆ. ಕೃತಕ ಬುದ್ಧಿಮತ್ತೆ (ಎಐ)ಯನ್ನು ಜವಾಬ್ದಾರಿಯಿಂದ ಬಳಸುವ ಬಗ್ಗೆ ಸಾರ್ವಜನಿಕರಲ್ಲಿ, ವಿಶೇಷವಾಗಿ ಮಕ್ಕಳು, ಮಹಿಳೆಯರು ಹಾಗೂ ಯುವಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ರಾಮಕೃಷ್ಣ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವ್ ಸುಲೋಚನ, ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.