ADVERTISEMENT

ಹೊಸೂರಿನಲ್ಲಿ ಸಿಲಿಂಡರ್ ಸ್ಫೋಟ: ಎಂಟು ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 14:16 IST
Last Updated 6 ಅಕ್ಟೋಬರ್ 2021, 14:16 IST
ತಮಿಳುನಾಡು ಹೊಸೂರಿನ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟದಿಂದ ಚಿಲ್ಲಾಪಿಲ್ಲಿಯಾಗಿರುವ ವಸ್ತುಗಳು
ತಮಿಳುನಾಡು ಹೊಸೂರಿನ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟದಿಂದ ಚಿಲ್ಲಾಪಿಲ್ಲಿಯಾಗಿರುವ ವಸ್ತುಗಳು   

ಆನೇಕಲ್:ತಮಿಳುನಾಡಿನ ಹೊಸೂರಿನ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ಎಂಟು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಗಾಯಗೊಂಡವರನ್ನು ಹೊಸೂರಿನ ರಾಮನಗರದ ನಿವಾಸಿಗಳಾದ ಭೀಮ್‌ಸಿಂಗ್‌, ಅರವಿಂದ್‌, ರೂಬಿ, ಚಂದ್ರಾದೇವಿ, ಹೃತಿಕ್‌, ಸಬೀರ್‌ ಮತ್ತು ಸಾಧಿಕ್‌ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉತ್ತರ ಪ್ರದೇಶ ಮೂಲದ ಈ ಕುಟುಂಬ ಪಾನಿಪುರಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿತ್ತು. ಹೊಸೂರಿನ ರಾಮನಗರದಲ್ಲಿ ವಾಸವಾಗಿದ್ದ ಅವರು ಬೆಳಿಗ್ಗೆ ಅಡುಗೆ ಮಾಡಲು ಗ್ಯಾಸ್‌ ಸ್ಟೌ ಹೊತ್ತಿಸಿದಾಗ ಸಿಲಿಂಡರ್‌ ಸ್ಫೋಟಗೊಂಡು ಮನೆಯಲ್ಲಿದ್ದವರು ಗಾಯಗೊಂಡಿದ್ದಾರೆ.

ADVERTISEMENT

ಸಿಲಿಂಡರ್‌ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳು ಚಿಲ್ಲಾಪಿಲ್ಲಿಯಾಗಿದ್ದು ಮನೆಯ ಚಾವಣಿ ಕಿತ್ತು ಹೋಗಿದೆ. ಮನೆಯಲ್ಲಿನ ಎಲೆಕ್ಟ್ರಿಕ್‌ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಹೊಸೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.