ದೊಡ್ಡಬಳ್ಳಾಪುರ: ತಾಲ್ಲೂಕು ಬಿಜೆಪಿ ಇಬ್ಬರು ಮುಖಂಡರು ಡಾಬಾಯೊಂದರಲ್ಲಿ ಯುವತಿಯರೊಂದಿಗೆ ಕುಳಿತು ಮದ್ಯ ಸೇವಿಸುತ್ತಾ ಅಸಭ್ಯವಾಗಿ ಮಾತನಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ.
ಟಿಎಪಿಸಿಎಂಎಸ್ ಚುನಾವಣಾ ಪ್ರಚಾರದ ಭರಾಟೆ ನಡುವೆ ಈ ವಿಡಿಯೊ ಸಾಕಷ್ಟು ಸಂಚಲನ ಮೂಡಿಸಿದೆ. ಶಿಸ್ತಿನ ಪಕ್ಷ ಎಂದೇ ಹೆಸರಾಗಿರುವ ಬಿಜೆಪಿಯಲ್ಲಿ ಜವಾಬ್ದಾರಿ ಸ್ಥಾನದಲ್ಲಿ ಇರುವ ಮುಖಂಡರು ಯುವತಿಯರೊಂದಿಗೆ ಈ ರೀತಿ ಡಾಬಾದಲ್ಲಿ ಕುಳಿತು ಕುಡಿಯುತ್ತಾ ಬಾಯಿಗೆ ಬಂದಂತೆ ಹರಟುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.