ADVERTISEMENT

ಆನೇಕಲ್‌: ಆರ್‌ಎಸ್‌ಎಸ್‌ ವಿರುದ್ಧ ದಸಂಸ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 1:57 IST
Last Updated 11 ನವೆಂಬರ್ 2025, 1:57 IST
<div class="paragraphs"><p>ಆನೇಕಲ್‌ನ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು</p></div>

ಆನೇಕಲ್‌ನ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು

   

ಆನೇಕಲ್ : ಆರ್‌ಎಸ್‌ಎಸ್‌ ದೇಶದಲ್ಲಿ ಕೋಮುಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುತ್ತಿದೆ. ಈ ಕುತಂತ್ರದ ವಿರುದ್ಧ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲನನ್ನು ಬಂಧಿಸಿ ಕಾನೂನು ಕ್ರಮ ವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ADVERTISEMENT

ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಕರೆ ಮಾಡಿ ಅಶ್ಲೀಲ ಪದ ಬಳಸಿ ಜೀವ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ವಹಿಸಬೇಕು. ಸರ್ಕಾರದ ಷರತ್ತು ಬದ್ಧ ನಿಯಮ ಮೀರಿ ಆರ್‌ಎಸ್‌ಎಸ್‌ ಚಿತ್ತಾಪುರದಲ್ಲಿ ಪಥಸಂಚಲನ ಮಾಡಿದರೆ ಕಾನೂನು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಾರಗೊಂಡನಹಳ್ಳಿ ದಶರಥ್‌ ಮಾತನಾಡಿ ಭಾರತದಲ್ಲಿ ಸಂವಿಧಾನವೇ ಪರಮೋಚ್ಛವಾಗಿದೆ. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕ್ರಮ ವಹಿಸಬೇಕು. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಪ್ರಯತ್ನಿಸಿರುವುದು ಸಂವಿಧಾನದ ಮೇಲಿನ ದೌರ್ಜನ್ಯವಾಗಿದೆ. ಹಾಗಾಗಿ ಇಂತಹವರ ವಿರುದ್ಧ ತುರ್ತು ಕ್ರಮ ವಹಿಸಬೇಕು. ಸಂವಿಧಾನದ ರಕ್ಷಣೆಗಾಗಿ ಎಲ್ಲರೂ ಒಗ್ಗೂಡಬೇಕು ಎಂದರು.

ರಾಜ್ಯ ಸಮಿತಿ ಸದಸ್ಯ ಜಿಗಳ ಶ್ರೀರಾಮ್‌, ಬಿಬಿಎಂಪಿ ಸಂಚಾಲಕ ಮಾವಳ್ಳಿ ವೆಂಕಟೇಶ್‌, ಅರೇನೂರು ಶಿವು, ಮಧು, ಗೋಪಾಲ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.