ದಾಬಸ್ ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶದ ಜಿಂದಾಲ್ ಕಾರ್ಖಾನೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಡೇವಿಡ್ (25) ಮೃತಪಟ್ಟಿದ್ದಾರೆ.
ತಮಿಳುನಾಡಿನ ಡೇವಿಡ್ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲಸದ ವೇಳೆ ಅಲ್ಯೂಮಿನಿಯಂ ಶೀಟ್ ಕಟ್ ಮಾಡುವಾಗ ಶಾರ್ಟ್ ಸರ್ಕಿಟ್‌ನಿಂದ ವಿದ್ಯುತ್ ಸ್ಪರ್ಶವಾಗಿ ತೀವ್ರವಾಗಿ ಗಾಯಗೊಂಡಿದ್ದರು.
ಚಿಕಿತ್ಸೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.