ADVERTISEMENT

ದೊಡ್ಡಬಳ್ಳಾಪುರ: ದೇಗುಲ ಪ್ರತಿಷ್ಠಾಪನಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2021, 7:01 IST
Last Updated 4 ನವೆಂಬರ್ 2021, 7:01 IST
ಚನ್ನರಾಯಪಟ್ಟಣದ ಭಾರತೀಯ ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿಯ ಕಚೇರಿಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು
ಚನ್ನರಾಯಪಟ್ಟಣದ ಭಾರತೀಯ ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿಯ ಕಚೇರಿಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು   

ದೊಡ್ಡಬಳ್ಳಾಪುರ:ತಾಲ್ಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನ. 7ರಂದು ಮೈಲಾರಲಿಂಗೇಶ್ವರ ಸ್ವಾಮಿ, ಗಂಗಮಾಳಮ್ಮ ಮತ್ತು ತುಪ್ಪದ ಮಾಳಮ್ಮ, ಶಿವಲಿಂಗ, ಗಣಪತಿ ಹಾಗೂ ನಂದಿ ದೇವರ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ.

ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಕಾಗಿನೆಲೆಯ ಕನಕಗುರು ಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಕಪಿಲಮುನಿ ಗುರುಪೀಠದ ಗುರುವೆಂಕಪ್ಪಯ್ಯ ಒಡೆಯರ್‌ ನೇತೃತ್ವ‌ವಹಿಸಲಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೇವಾಲಯ ಉದ್ಘಾಟಿಸಲಿದ್ದಾರೆ. ಶಾಸಕ ಟಿ. ವೆಂಕಟರಮಣಯ್ಯ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌, ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್, ಮಾಜಿ ಸಚಿವ ಆರ್‌. ಶಂಕರ್‌ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.