ADVERTISEMENT

ದೇವನಹಳ್ಳಿ | ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರಜಾಪ್ರಭುತ್ವ: ಡಿಸಿ ಬಸವರಾಜು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 1:41 IST
Last Updated 16 ಸೆಪ್ಟೆಂಬರ್ 2025, 1:41 IST
ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಲಾಯಿತು
ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಲಾಯಿತು   

ದೇವನಹಳ್ಳಿ: ಸಂವಿಧಾನದ ಬಗ್ಗೆ ತಿಳಿಯಲು, ಬಲಿಷ್ಠ ರಾಷ್ಟ್ರ ಕಟ್ಟಲು ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ತತ್ವ ಮತ್ತು ಮಹತ್ವ ತಿಳಿಯಬೇಕು. ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಸಹಭಾಗಿತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತದಲ್ಲಿಯೂ ಮತದಾನ ಪಟ್ಟಿಗೆ ಮತದಾರರನ್ನು ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ಮತದಾನದಿಂದ ಯಾರೊಬ್ಬರೂ ವಂಚಿತರಾಗದಂತೆ ಹಲವಾರು ಕಾರ್ಯಕ್ರಮ ಮಾಡಿ ಎಲ್ಲರನ್ನೂ ಮತದಾರರ ಪಟ್ಟಿಯಲ್ಲಿ ಸೇರಿಸುವಂತಹ ಕೆಲಸ ಮಾಡುತ್ತಿದ್ದೇವೆ ಎಂದರು.

ADVERTISEMENT

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ  ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿದರು.

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎನ್.ಬಿ. ಸತೀಶ್ ಕುಮಾರ್ ಅವರು ವಿಶೇಷ ಉಪನ್ಯಾಸ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎನ್. ಅನುರಾಧ, ದೇವನಹಳ್ಳಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಜಗನ್ನಾಥ್, ಪುರಸಭೆ ಮಾಜಿ ಅದ್ಯಕ್ಷರಾದ ಮೂರ್ತಿ, ತಾಲ್ಲೂಕು ಪಂಚಾಯತಿಯ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್ ಗೌಡ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.