ADVERTISEMENT

ಕಿಡಿಗೇಡಿಗಳ ಕೃತ್ಯಕ್ಕೆ ರಾಗಿ ಬಣವೆ ನಾಶ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2020, 5:57 IST
Last Updated 25 ಡಿಸೆಂಬರ್ 2020, 5:57 IST
ಜಾಲಗೆರೆಯಲ್ಲಿ ರಾಗಿ ಬಣವೆಗೆ ಬೆಂಕಿ ಬಿದ್ದಿರುವುದನ್ನು ನಂದಿಸುತ್ತಿರುವ ಅಗ್ನಿ ಶಾಮಕ ಸಿಬ್ಬಂದಿ
ಜಾಲಗೆರೆಯಲ್ಲಿ ರಾಗಿ ಬಣವೆಗೆ ಬೆಂಕಿ ಬಿದ್ದಿರುವುದನ್ನು ನಂದಿಸುತ್ತಿರುವ ಅಗ್ನಿ ಶಾಮಕ ಸಿಬ್ಬಂದಿ   

ದೊಡ್ಡಬಳ್ಳಾಪುರ: ತಾಲ್ಲೂಕಿನ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಜಾಲಗೆರೆಯಲ್ಲಿ ರಾಗಿ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ರಾಗಿ ಬಣವೆ ನಾಶವಾಗಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಶ್ಯಾಮರಾಜು ಮತ್ತು ಗೋಪಾಲಕೃಷ್ಣ ಎಂಬ ರೈತರಿಗೆ ಸೇರಿದ ಬಣವೆಗೆ ರಾತ್ರಿ 1 ಗಂಟೆ ಸಮಯದಲ್ಲಿ ಕಿಡಿಗೇಡಿಗಳು ಬಣವೆಗೆ ಬೆಂಕಿ ಹಚ್ಚಿದ್ದಾರೆ. ಬೆಳಿಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಕೈಗೊಂಡರೂ ರಾಗಿ ಬಣವೆ ಸುಟ್ಟು ಹೋಗಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT