ADVERTISEMENT

ಶ್ರೀಗಂಧದ ಮರ ಕಡಿಯುತ್ತಿದ್ದವನ ಬಂಧನ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 15:19 IST
Last Updated 10 ಡಿಸೆಂಬರ್ 2019, 15:19 IST
ಶಿವರಾಜ
ಶಿವರಾಜ   

ಚನ್ನಪಟ್ಟಣ: ಇಲ್ಲಿನಚಿಕ್ಕಮಣ್ಣುಗುಡ್ಡೆ ಮೀಸಲು ಅರಣ್ಯ ಪ್ರದೇಶದ ಕೆಂಪಿಕಟ್ಟೆ ಅರಣ್ಯಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದ ಮಾಹಿತಿ ಆಧರಿಸಿ ಅರಣ್ಯ ಅಧಿಕಾರಿಗಳು ಮಂಗಳವಾರ ಯುವಕನೊಬ್ಬನನ್ನು ಬಂಧಿಸಿದ್ದಾರೆ.

ರಾಮನಗರದ ರಾಮದೇವರ ಬೆಟ್ಟದ ಬಳೀಯ ಇರುಳಿಗರ ಕಾಲೋನಿ ನಿವಾಸಿ ಶಿವರಾಜ (20) ಬಂಧಿತ ಆರೋಪಿ. ಈತನಿಂದ 15 ಸಣ್ಣಸಣ್ಣ ಶ್ರೀಗಂಧದ ತುಂಡುಗಳು, ಮೂರು ದೊಡ್ಡ ತುಂಡುಗಳು, ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಈತನಿಗೆ ಸಹಾಯ ಮಾಡಿದ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಉಪವಲಯ ಅರಣ್ಯಾಧಿಕಾರಿಗಳಾದ ಶ್ರೀಧರ್, ಮಧುಕುಮಾರ್, ಅರಣ್ಯ ರಕ್ಷಕರಾದ ಕೃಷ್ಣ, ವೆಂಕಟಸ್ವಾಮಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.