
ಪ್ರಜಾವಾಣಿ ವಾರ್ತೆ
ವಿಜಯಪುರ (ದೇವನಹಳ್ಳಿ): ಹೋಬಳಿಯ ಕೋರಮಂಗಲ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ಗ್ರಾಮ ಪಂಚಾಯಿತಿ ಕಟ್ಟಡದ ಕಿಟಕಿಯ ಗ್ಲಾಸ್‍ಗಳನ್ನು ಪುಡಿ ಮಾಡಿದ್ದಾರೆ.
25 ರಿಂದ 30 ವರ್ಷದೊಳಗಿನ ಯುವಕರು, ಮಂಗಳವಾರ ತಡರಾತ್ರಿ ಗ್ರಾಮ ಪಂಚಾಯಿತಿ ಕಟ್ಟಡದ ಕಿಟಕಿಯ ಗಾಜುಗಳನ್ನು ಬಾಟಲಿಗಳಿಂದ ಒಡೆದಿದ್ದಾರೆ. ಕುಡುಕರ ಹಾವಳಿಗೆ ಗ್ರಾಮದ ಜನತೆ ಭಯಭೀತರಾಗಿದ್ದಾರೆ.
ಕಿಡಿಗೇಡಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಬೇಕು. ರಾತ್ರಿ ಗ್ರಾಮದಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯಿತಿ ಅಧಿಕಾರಿ ವಿಜಯಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.