ಪ್ರಾತಿನಿಧಿಕ ಚಿತ್ರ
ದೇವನಹಳ್ಳಿ: ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪ್ರಸ್ತಾವಿತ ಏರೋಸ್ಪೇಸ್ ಪಾರ್ಕ್‌ಗಾಗಿ ಸ್ವಯಂಪ್ರೇರಿತವಾಗಿ ಭೂಮಿ ನೀಡಲು ಮೂರು ತಿಂಗಳ ಗಡುವು ನಿಗದಿ ಮಾಡಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಪ್ರಕಟಣೆ ಹೊರಡಿಸಿರುವುದಕ್ಕೆ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಹಿಂದೆ ಕೈಬಿಟ್ಟಿದ್ದರೂ, ಇದೀಗ ಸ್ವಯಂಪ್ರೇರಿತ ಭೂಮಿ ನೀಡುವ ಆಯ್ಕೆ ಮುಂದಿಟ್ಟು ‘ಹಿಂಬಾಗಿಲಿನಿಂದ’ ಭೂಮಿ ಪಡೆಯಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಜ.23ರಂದು ಕೆಐಎಡಿಬಿ ಸಾರ್ವಜನಿಕ ಪ್ರಕಟಣೆ ಹೊರ ಡಿಸಿದ್ದು, ಏ.30ರೊಳಗೆ ಭೂಮಿ ನೀಡಲು ಸಮ್ಮತಿಸುವ ರೈತರು ಬೆಂಗಳೂರಿನ ನೃಪತುಂಗ ರಸ್ತೆಯ ಅರವಿಂದ ಭವನದ ಕೆಐಎಡಿಬಿ ಕಚೇರಿಗೆ ತಮ್ಮ ಒಪ್ಪಿಗೆ ಪತ್ರ ಸಲ್ಲಿಸುವಂತೆ ಸೂಚಿಸಿದೆ. ಭೂಮಿ ನೀಡುವವರಿಗೆ ಸಮಿತಿ ನಿರ್ಧರಿಸುವ ಪರಿಹಾರ ನೀಡುವುದಾಗಿ ತಿಳಿಸಿದೆ.
‘ಕೆಐಎಡಿಬಿ ಪ್ರಕಟಣೆಯನ್ನು ಒಪ್ಪುವುದಿಲ್ಲ. ಮುಂದಿನ ಹೋರಾಟದ ರೂಪುರೇಷೆಯನ್ನು ಶೀಘ್ರದಲ್ಲೇ ತೀರ್ಮಾನಿಸುತ್ತೇವೆ’ ಎಂದು ಭೂಸ್ವಾಧೀನ ವಿರೋಧಿ ಹೋರಾಟ ಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.