ADVERTISEMENT

ಬಾಬಾ ಸಾಹೇಬ್‌, ಬಾಬೂಜಿ ಪಲ್ಲಕ್ಕಿ ಉತ್ಸವ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2025, 14:04 IST
Last Updated 14 ಏಪ್ರಿಲ್ 2025, 14:04 IST
ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ರಥೋತ್ಸವದಲ್ಲಿ ಮುಖಂಡರು, ಸಿಬ್ಬಂದಿ, ಗ್ರಾಮಸ್ಥರು ಭಾಗಿಯಾಗಿದ್ದರು
ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ರಥೋತ್ಸವದಲ್ಲಿ ಮುಖಂಡರು, ಸಿಬ್ಬಂದಿ, ಗ್ರಾಮಸ್ಥರು ಭಾಗಿಯಾಗಿದ್ದರು   

ಕುಂದಾಣ (ದೇವನಹಳ್ಳಿ): ತಾಲ್ಲೂಕಿನ ಕುಂದಾಣ ಹೋಬಳಿಯ ಜಾಲಿಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಅಂಬೇಡ್ಕರ್‌ ಮತ್ತು ಬಾಬೂ ಜಗಜೀವನ್‌ ರಾಂ ಅವರ ಭಾವಚಿತ್ರವನ್ನು ಪಲ್ಲಕ್ಕಿ ಉತ್ಸವ ನಡೆಸಲಾಯಿತು.

ಮೆರವಣಿಗೆಗೆ ಚಾಲನೆ ನೀಡಿದ ಜಾಲಿಗೆ ಗ್ರಾ.ಪಂ ಅಧ್ಯಕ್ಷ ಎಸ್‌.ಎಂ.ಆನಂದ್ ಕುಮಾರ್, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮಂತ್ರದಿಂದ ಸಮಾಜಕ್ಕೆ ಹೊಸ ಮಾರ್ಗ ಹಾಕಿ ಕೊಟ್ಟ ಮಹಾನ್‌ ಮನವತಾವಾದಿ ಎಂದು ತಿಳಿಸಿದರು.

ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರ ನಿಂತವರು. ಅವರಿಗೆಲ್ಲ ನ್ಯಾಯ ಕೊಡಿಸಲು ತಮ್ಮ ಬದುಕನ್ನೇ ಮುಡಿಪಾಗಿಟ್ಟರು. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು ಎಂದು ಸ್ಮರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.