ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿಸಿ ಭಾನುವಾರದಿಂದ ಪ್ರತಿ ಹಳ್ಳಿಯಲ್ಲಿಯೂ ಜನಾಂದೋಲನ ಯಾತ್ರೆ ಪ್ರಾರಂಭಿಸುವುದಾಗಿ ಹೋರಾಟನಿರತರ ರೈತರು ತಿಳಿಸಿದ್ದಾರೆ.
ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ ಜನ ಜಾಗೃತಿ ಮೂಡಿಸಲಾಗುವುದು. ಕೃಷಿ ಭೂಮಿಯನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತು ರೈತರಲ್ಲಿ ಅರಿವು ಮೂಡಿಸಲು ರೈತ ಮುಖಂಡರು ಈ ನಿರ್ಧಾರ ಕೈಗೊಂಡಿದ್ದಾರೆ.
ಈ ಕುರಿತು ಶನಿವಾರ ಸಂಯುಕ್ತ ಹೋರಾಟ ಕರ್ನಾಟಕ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಸಭೆ ನಡೆಸಿ, ಜನಾಂದೋಲನದ ರೂಪರೇಷೆ ಕುರಿತು ಚರ್ಚೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ15ರಂದು ಸಭೆ ನಡೆಸುವವರೆಗೂ ಇಲ್ಲಿನ ರೈತರು ಭೂಸ್ವಾಧೀನ ವಿರೋಧಿ ಗ್ರಾಮ ಜನಾಂದೋಲನ ಯಾತ್ರೆ ಹಮ್ಮಿಕೊಂಡಿದ್ದಾರೆ.
ಸಭೆಯಲ್ಲಿ ಬಡಗಲಪುರ ನಾಗೇಂದ್ರ, ಯು.ಬಸವರಾಜು, ನೂರ್ ಶ್ರೀಧರ್, ಯಶವಂತ್, ಪೂಜಾರ್ ಸೇರಿದಂತೆ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ರೈತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.