ದೇವನಹಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯ ವೆನ್‌ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದು. 19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಹೆಣ್ಣುಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು (ದೈಹಿಕ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದೆ) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 23 ಕೊನೆ ದಿನ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 206, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಅಥವಾ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆ ಖಾಲಿ
ದೇವನಹಳ್ಳಿ: ಜಿಲ್ಲೆಯ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಒಂದು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ, ಬಿ.ಟೆಕ್ ಅಥವಾ ಬಿ.ಸಿ.ಎ.(ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್), ಕಂಪ್ಯೂಟರ್ ವಿಜ್ಞಾನ ಅಥವಾ ಮಾಹಿತಿ ವಿಜ್ಞಾನ, ಎಂಜಿನಿಯರಿಂಗ್ ಎಲೆಕ್ಟ್ರಾನಿಕ್ ಹಾಗೂ ಸಂವಹನ ಟೆಲಿಕಾಂನಲ್ಲಿ ಪದವಿ ಪಡೆದಿರಬೇಕು.
ಅನುಭವ ಇರುವವರಿಗೆ ಮೊದಲ ಆದ್ಯತೆ. ಮಾಹಿತಿ ತಂತ್ರಜ್ಞಾನದಲ್ಲಿ ಕನಿಷ್ಠ 3 ರಿಂದ 5 ವರ್ಷಗಳ ಅನುಭವ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯ ಮೇಲೆ ಹಿಡಿತವಿರಬೇಕು, ಎಂಎಸ್ ಆಫೀಸ್ ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕು.
ಏಪ್ರಿಲ್ 9ರೊಳಗೆ ನೋಂದಣಿ ಅಂಚೆಯ ಮೂಲಕ ತಮ್ಮ ಸ್ವ-ವಿವರಗಳ ಜೊತೆಗೆ ಪದವಿ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ ಹಾಗೂ ಇನ್ನಿತರೆ ದಾಖಲಾತಿಯನ್ನು ಸ್ವಯಂ ಪ್ರಮಾಣಿಸಿ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.7899085564 ಹಾಗೂ deo.bangalore3@gmail.com ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.