
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ದೇವನಹಳ್ಳಿ: ಪಟ್ಟಣದ ಹೊರವಲಯದಲ್ಲಿರುವ ಲಾಲಗೊಂಡನಹಳ್ಳಿ ಬುಧವಾರ ತಡರಾತ್ರಿ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ.
ದೇವನಹಳ್ಳಿಯ ಸಾದಹಳ್ಳಿ ಗ್ರಾಮದ ಮನೋಜ್ ಮತ್ತು ಇವರ ಇಬ್ಬರು ಸ್ನೇಹಿತರು ಮೃತರು. ಮೃತರ ದೇಹ ಭಾಗಶಃ ನಜ್ಜುಗುಜ್ಜಾಗಿರುವುದರಿಂದ ಇನ್ನೂ ಗುರುತು ಪತ್ತೆಯಾಗಿಲ್ಲ.
ಚಿಕ್ಕಬಳ್ಳಾಪುರದಿಂದ ಬರುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, ಕಾರು ಸಂಪೂರ್ಣ ಜಖಂ ಆಗಿದೆ.
ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.