ADVERTISEMENT

ದೇವನಹಳ್ಳಿ ತಾಲ್ಲೂಕು ವೀರಶೈವ ಲಿಂಗಾಯತ ಸಮಾಜ ಪ್ರತಿಭಾ ಪುರಸ್ಕಾರ- ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 2:46 IST
Last Updated 7 ಸೆಪ್ಟೆಂಬರ್ 2025, 2:46 IST
<div class="paragraphs"><p>ಸಾದರ ಸ್ವೀಕಾರ</p></div>

ಸಾದರ ಸ್ವೀಕಾರ

   

ದೇವನಹಳ್ಳಿ: ತಾಲ್ಲೂಕು ವೀರಶೈವ ಲಿಂಗಾಯತ ಸಮಾಜದ ಸಂಘದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸೆ.20ರಂದು ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಅರ್ಹ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಸೆ.15ರ ಒಳಗೆ ಪಟ್ಟಣದ ವಿಜಯಪುರ ವೃತ್ತದಲ್ಲಿರುವ ನಂದಿ ಸೌಹಾರ್ದ ಕ್ರೆಡಿಟ್‌ ಕೋ ಅಪರೇಟಿವ್ ಸೊಸೈಟಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಯೊಂದಿಗೆ ಸಲ್ಲಿಸಬೇಕು.

ADVERTISEMENT

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪಟ್ಟಣದ 23ನೇ ವಾರ್ಡ್ ಕೋಡಿಮಂಚೇನಹಳ್ಳಿ ಮೈಲಾರಲಿಂಗೇಶ್ವರ ಹಾಗೂ ಗಂಗಮಾಳಮ್ಮ ದೇವಾಲಯ ಆವರಣ ನಡೆಯುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಮಾಹಿತಿಗಾಗಿ ಮೊ.7760356241 ಸಂಪರ್ಕಿಸುವಂತೆ ವೀರಶೈವ ಲಿಂಗಾಯತ ಸಮಾಜ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎಸ್‌.ರಮೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.