
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಪತ್ರ
ದೇವನಹಳ್ಳಿ: ಮೀನುಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆಯ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಜೀವಂತ ಮೀನು ಮಾರಾಟ ಕೇಂದ್ರಕ್ಕೆ ಮೀನುಗಾರಿಕೆಯಲ್ಲಿ ತೊಡಗಿರುವ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೀನುಗಾರಿಕೆಯಲ್ಲಿ ತೊಡಗಿರುವ ಪರಿಶಿಷ್ಟ ಪಂಗಡದ ಆಸಕ್ತರು ಫೆ.6 ರೊಳಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅರ್ಜಿದಾರರು ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಆಯಾಯ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.