ADVERTISEMENT

ದೇವನಹಳ್ಳಿಯಲ್ಲಿ ಜನವರಿ 23ರಂದು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 3:08 IST
Last Updated 17 ಜನವರಿ 2026, 3:08 IST
ಪಾಕ ಸ್ಪರ್ಧೆಯಲ್ಲಿನ ನವಣೆ ಹುಗ್ಗಿ
ಪಾಕ ಸ್ಪರ್ಧೆಯಲ್ಲಿನ ನವಣೆ ಹುಗ್ಗಿ   

ದೇವನಹಳ್ಳಿ: ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ–2026ರ ಅಂಗವಾಗಿ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಜ.23ರಂದು ಬೆಳಿಗ್ಗೆ 9ಕ್ಕೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.

ಸಿರಿಧಾನ್ಯ ಬೆಳೆಗಳ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ಸ್ಪರ್ಧೆಯಲ್ಲಿ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಬಹುದು. ಜ.21ರ ಮಧ್ಯಾಹ್ನ 3ರೊಳಗೆ ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಸಿರಿಧಾನ್ಯ ಆಧಾರಿತ ಸಿಹಿ, ಖಾರ ಹಾಗೂ ಮರೆತು ಹೋದ ಖಾದ್ಯಗಳ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಪ್ರಥಮ ಬಹುಮಾನ ₹5,000, ದ್ವಿತೀಯ ₹3,000 ಹಾಗೂ ತೃತೀಯ ₹2,000 ನಿಗದಿಯಾಗಿದೆ. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಬಿ.ಜಿ. ಕಲಾವತಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.