
ದೇವನಹಳ್ಳಿ: ಬಡವರು, ನಿವೇಶನ ರಹಿತರಿಗೆ ಭೂಮಿ ನೀಡಬೇಕು. ಸರ್ಕಾರಿ ಜಾಗವನ್ನು ಮಾಫಿಯಾದವರಿಂದ ವಶಕ್ಕೆ ಪಡೆಯಬೇಕು, ಒತ್ತುವರಿ ಕಾರ್ಯಾಚರಣೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್) ವತಿಯಿಂದ ಜಿಲ್ಲಾಡಳಿತ ಭವನದ ಎದುರು ಗುರುವಾರ ಪ್ರತಿಭಟನೆ ನಡೆಯಿತು.
ಒತ್ತುವರಿಯಾಗಿರುವ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು, ಭೂಮಿ ಕಳೆದುಕೊಂಡವರಿಗೆ ಪುನಃ ನೀಡಬೇಕು. ನಕಲಿ ದಾಖಲೆ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಕೆಆರ್‌ಎಸ್ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ವಕೀಲ ನಿಖಿಲ್ ಆಗ್ರಹಿಸಿದರು.
ಜಿಲ್ಲಾಡಳಿತ ಭವನದ ಹಿಂದೆ, ಮುಂದೆ, ಅಕ್ಕಪಕ್ಕವೂ ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೂ ತೆರವುಗೊಳಿಸಲು ಅಧಿಕಾರಿಗಳು ಮುಂದೆ ಬರುತ್ತಿಲ್ಲ. ಅಧಿಕಾರಿಗಳು ಈ ಕೂಡಲೇ ಒತ್ತುವರಿ ತೆರವುಗೊಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕೆಆರ್‌ಎಸ್‌ನ ವೆಂಕಟೇಶ್ ಮೂರ್ತಿ, ಮಧು ಕುಮಾರ್, ಮಣಿ, ಡಿಎಸ್ಎಸ್ ಮುಖಂಡ ಪಾಳ್ಯ ಮುನಿರಾಜು, ರೈತ ಘಟಕದ ನಾಗರಾಜು, ಗೋವಿಂದರಾಜು, ಮುನೀಂದ್ರ, ಅಂಬರೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.