
ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಅಧಿಕಾರಿಗಳ ಗೈರಿಗೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿ ಕೆಲವೇ ಅಧಿಕಾರಿಗಳು ಹಾಜರಿರುವುದು ನೋಡಿದರೆ ಗ್ರಾಮ ಸಭೆಯನ್ನು ಏಕೆ ಮಾಡಬೇಕೆಂದು ಅಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಪಂಚಾಯಿತಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದಕ್ಕಾಗಿ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಕೋನವನ್ನಿಟ್ಟುಕೊಂಡು ಸರ್ಕಾರ ಹಲವು ಯೋಜನೆ ರೂಪಿಸಿದೆ. ಅವುಗಳನ್ನು ಜನರಿಗೆ ತಲುಪಿಸಲಾಗುತ್ತಿದೆ. ಜನರು ಯೋಜನೆಗಳ ಬಗ್ಗೆ ಹೆಚ್ಚು ತಿಳಿದುಕೊಂಡು ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಲು ಸರ್ಕಾರ ರೂಪಿಸಿರುವ ಯೋಜನೆಗಳನ್ನು ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಿ ಎಂದು ಚನ್ನರಾಯಪಟ್ಟಣ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀವೆಂಕಟೇಶ್ ಹೇಳಿದರು.
ಸಾರ್ವಜನಿಕರು ತಮ್ಮ ಗ್ರಾಮಗಳ ಯಾವುದೇ ಸಮಸ್ಯೆಗಳಿದ್ದಲ್ಲಿ ಪಂಚಾಯ್ತಿಗೆ ಲಿಖಿತ ದೂರು ನೀಡಿ, ನಾವು ಕ್ರಿಯಾಯೋಜನೆ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸಿ.ಮಾರೇಗೌಡ ತಿಳಿಸಿದರು.
ಶಿಕ್ಷಣ ಇಲಾಖೆಯ ರಾಜಣ್ಣ ಮಾತನಾಡಿದರು.
ಗ್ರಾ.ಪಂ ಕಾರ್ಯದರ್ಶಿ ಮಂಜುನಾಥ್, ನೋಡಲ್ ಅಧಿಕಾರಿ ಮಹಾಂತೇಶ್ ಓಲೇಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಲಲಿತಮ್ಮ, ಕೃಷಿ ಅಧಿಕಾರಿ ವೆಂಕಟೇಶ್, ಗ್ರಾ.ಪಂ. ಉಪಾಧ್ಯಕ್ಷ ಸಿ.ಎನ್. ರಾಜಾನಂದಗೌಡ, ಸಿ.ಮಾರೇಗೌಡ, ಸಿ.ವೈ. ಮಂಜುನಾಥ್, ಸಿ.ಜೆ. ಮುನಿಲಕ್ಷ್ಮಮ್ಮ, ವಿ.ದೀಪ, ಶಿಲ್ಪ, ಕೆ. ಚನ್ನಕೇಶವ, ಗೌರಮ್ಮ, ಚಂದ್ರಕಲಾ, ಲಕ್ಷ್ಮಮ್ಮ, ಶಾಂತಮ್ಮ, ಶಿವಕುಮಾರ್, ರತ್ನಮ್ಮ, ಬಿ.ಕೆ ಮಂಜುನಾಥ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.