ADVERTISEMENT

ದೇವನಹಳ್ಳಿ: ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯ!

ಪ್ರಗತಿ ಪ್ರತಿಮೆ, ಪ್ರಧಾನಿ ಕಾರ್ಯಕ್ರಮಕ್ಕೆ ಬಿಜೆಪಿಯೇತರ ಶಾಸಕರಿಗೆ ಇಲ್ಲ ಆಹ್ವಾನ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 4:40 IST
Last Updated 10 ನವೆಂಬರ್ 2022, 4:40 IST
ವಿಮಾನ ನಿಲ್ಧಾಣದಲ್ಲಿ ನಡೆದ ಮೃತ್ತಿಕೆ ಕಾರ್ಯಕ್ರಮದಲ್ಲಿ ಬಿಜೆಪಿಯ ನಾಯಕರು
ವಿಮಾನ ನಿಲ್ಧಾಣದಲ್ಲಿ ನಡೆದ ಮೃತ್ತಿಕೆ ಕಾರ್ಯಕ್ರಮದಲ್ಲಿ ಬಿಜೆಪಿಯ ನಾಯಕರು   

ದೇವನಹಳ್ಳಿ:ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನ.11ರಂದು ನಡೆಯಲಿರುವ ನಾಡಪ್ರಭು ‘ಪ್ರಗತಿಯ ಪ್ರತಿಮೆ’ ಹಾಗೂ ವಿಮಾನ ನಿಲ್ದಾಣದ ಟರ್ಮಿಲ್‌ –2 ಅನಾವರಣ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ಹಾಗೂ ಗ್ರಾ.ಪಂ ಅಧ್ಯಕ್ಷರಿಗೆ ಆಹ್ವಾನ ನೀಡದಿರುವುದು ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.

ಬುಧವಾರ ನಡೆದ ಮೃತ್ತಿಕೆ ಸಂಗ್ರಹ ಅಭಿಯಾನ ಮುಕ್ತಾಯ ಸಮಾರಂಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಗೆ ಸೂಕ್ತ ಅವಕಾಶ ಕಲ್ಪಿಸಿರಲಿಲ್ಲ. ಈ ನಡೆಗೂ ಬಾರಿ ಟೀಕೆ ವ್ಯಕ್ತವಾಗುತ್ತಿದೆ.ಇನ್ನೂ ಎರಡು ದಿನದಲ್ಲಿ ಕಾರ್ಯಕ್ರಮ ನಡೆಯಲಿದ್ದು ಸ್ಥಳೀಯ ಜನಪ್ರತಿನಿಧಿಗಳಿಗೆ ಇನ್ನೂ ಆಹ್ವಾನ ಪತ್ರಿಕೆ ತಲುಪಿಲ್ಲ.

ಶಿಷ್ಟಾಚಾರದಂತೆ ಸರ್ಕಾರಿ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು ಹಾಗೂ ಸ್ಥಳೀಯ ಗ್ರಾ.ಪಂ ಅಧ್ಯಕ್ಷರಿಗೆಆಹ್ವಾನ ನೀಡಬೇಕು. ಸರ್ಕಾರದ ಕಾರ್ಯಕ್ರಮದಲ್ಲಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಯಾವೊಬ್ಬ ಸದಸ್ಯರು, ಅಧಿಕಾರಿಗಳು ಮತ್ತು ವಿರೋಧ ಪಕ್ಷಕ್ಕೆ ಸೇರಿದ ಜನಪ್ರತಿನಿಧಿಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದುಆರೋಪಿಸಲಾಗಿದೆ.

ADVERTISEMENT

ಪ್ರಧಾನಿ ಸಾರ್ವಜನಿಕ ಕಾರ್ಯಕ್ರಮ ನಡೆಯುತ್ತಿರುವ ಕೆಂಪೇಗೌಡಅಂತರರಾಷ್ಟ್ರೀಯ ವಿಮಾನನಿಲ್ದಾಣವು ಅಣ್ಣೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತದೆ.ಇದುವರೆಗೂ ಕಾರ್ಯಕ್ರಮಕ್ಕೆ ಆಹ್ವಾನ ಬಂದಿಲ್ಲ. ಜಾತ್ಯತೀತ ನಾಯಕ ಕೆಂಪೇಗೌಡರ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಚಾರ ತಂತ್ರಗಾರಿಕೆ ಬೇಸರ ತಂದಿದೆ ಎಂದು ಅಣ್ಣೇಶ್ವ ಗ್ರಾಪಂ ಅಧ್ಯಕ್ಷ ವೇಣುಗೋಪಾಲ್‌ ಬೇಸರ
ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.