ADVERTISEMENT

ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಂಬಾಕು ನಿಯಂತ್ರಣ ಘಟಕ ದಾಳಿ

17 ಪ್ರಕರಣ ದಾಖಲು: ₹4,200 ದಂಡ ವಸೂಲಿ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2023, 16:03 IST
Last Updated 13 ಡಿಸೆಂಬರ್ 2023, 16:03 IST
ರಾಜ್ಯ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಅಧಿಕಾರಿಗಳ ತಂಡ ದೇವನಹಳ್ಳಿ ತಾಲ್ಲೂಕಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಮಳಿಗೆಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು.
ರಾಜ್ಯ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಅಧಿಕಾರಿಗಳ ತಂಡ ದೇವನಹಳ್ಳಿ ತಾಲ್ಲೂಕಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಮಳಿಗೆಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು.   

ದೇವನಹಳ್ಳಿ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡ ಬುಧವಾರ ದಾಳಿ ನಡೆಸಿ, ಕೋಪ್ಟಾ ಕಾಯಿದೆ ಉಲ್ಲಂಘಿಸಿದ ಮಳಿಗೆಗಳ ಮೇಲೆ ಪ್ರಕರಣ ದಾಖಿಸಿ, ₹4,200 ದಂಡ ವಸೂಲಿ ಮಾಡಿದ್ದಾರೆ.

ಕೋಪ್ಟಾ-2023 ಕಾಯಿದೆಯ ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 17 ಪ್ರಕರಣ ದಾಖಲಿಸಲಾಗಿದೆ.

ಎನ್‌ಟಿಸಿಪಿ ಉಪ ನಿರ್ದೇಶಕ ಡಾ.ರಜನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮುರುಳಿ ಮೋಹನ್‌, ಡಾ‌.ಶ್ರೀದೇವಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಪೊಲೀಸ್ ಇಲಾಖೆ ಸಿಬ್ಬಂದಿ ಪ್ರಭಾಕರ್, ಜೇಲ್ ಥೋಮಸ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.