
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಇಲ್ಲಿನ ಖಾಸಗಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಅಕ್ಕ–ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮಾಲೀಕ ಧನಂಜಯ್ ಹಾಗೂ ಪ್ರಾಂಶುಪಾಲೆ ಶೈಲಜಾ ಬಂಧಿತರು. ಇಬ್ಬರ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ಶಾಲೆಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ.
ಅಕ್ಕ,ತಂಗಿ ಇಬ್ಬರೂ ವಸತಿಶಾಲೆ ಯಲ್ಲಿ ಓದುತ್ತಿದ್ದರು. ಧನಂಜಯ್ ಈಚೆಗೆ ಅಕ್ಕನನ್ನು ಶಾಲೆಯ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿ ಸಲಾಗಿದೆ. ಗರ್ಭಧಾರಣೆ ತಪ್ಪಿಸಲು ಆಹಾರದಲ್ಲಿ ಔಷಧಿ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಳಿಕ ಆಕೆಯ ತಂಗಿಯ ಮೇಲೂ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಆದರೆ, ಆಕೆ ಶೌಚಾಲಯದಲ್ಲಿ ಅಡಗಿ ತಪ್ಪಿಸಿಕೊಂಡಿ ರುವುದಾಗಿ ತಿಳಿದು ಬಂದಿದೆ.
ಪ್ರಾಂಶುಪಾಲೆ ಶೈಲಜಾ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ವಿದ್ಯಾರ್ಥಿನಿಯರಿಗೆ ಬೆದರಿಸಿದ್ದರು. ಹೆಚ್ಚಿನ ಅಂಕ, ಉಚಿತ ಶಿಕ್ಷಣದ ಆಮಿಷ ಒಡ್ಡಿದ್ದರು. ವಿಷಯ ಬಹಿರಂಗ ಪಡಿಸಿದರೆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸುವು ದಾಗಿ ಬೆದರಿಕೆ ಹಾಕಲಾಗಿತ್ತು ಎಂದು ಪೋಷಕರು ಆರೋಪಿಸಿದ್ದಾರೆ.
ಘಟನೆ ಬಳಿಕ ಪೋಷಕರಿಗೆ ಮಕ್ಕಳ ಭೇಟಿಗೆ ಅವಕಾಶ ನೀಡಿಲ್ಲ. ದೂರವಾಣಿ ಸಂಪರ್ಕ ಕಡಿತಗೊಳಿಸ
ಲಾಗಿತ್ತು. ‘ಪ್ರವಾಸಕ್ಕೆ ಕಳುಹಿಸಿದ್ದೇವೆ ಅಥವಾ ಓದುತ್ತಿದ್ದಾರೆ’ ಎಂಬ ನೆಪ ಹೇಳಲಾಗಿತ್ತು. ಪೋಷಕರು ಒತ್ತಾಯಿಸಿದ ಬಳಿಕ ಕೆಲವೇ ನಿಮಿಷದ ಮಾತುಕತೆಯಲ್ಲಿ ಬಾಲಕಿಯರು ನಡೆದ ಘಟನೆಯನ್ನು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರು ಮಲಗುತ್ತಿದ್ದ ವಸತಿ ನಿಲಯದ ಕೊಠಡಿಗೆ ಬೀಗ ಅಥವಾ ಬೋಲ್ಟ್ ವ್ಯವಸ್ಥೆ ಇರಲಿಲ್ಲ. ಕೃತ್ಯ ನಡೆದ ದಿನ ವಾರ್ಡನ್‌ನನ್ನು ಮನೆಗೆ ಕಳುಹಿಸಲಾಗಿತ್ತು ಎಂಬ ಮಾಹಿತಿ ಪೊಲೀಸರಿಗೆ
ಲಭ್ಯವಾಗಿದೆ.
ವಸತಿ ನಿಲಯದಲ್ಲಿರುವ ವಿದ್ಯಾರ್ಥಿ ನಿಯರ ಸುರಕ್ಷತೆಗೆ ಜಿಲ್ಲಾಡಳಿತ ಕ್ರಮ ವಹಿಸಿದ್ದು, 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸ
ಲಾಗುತ್ತಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಡಿವಿಆರ್‌ನಲ್ಲಿ ಸಂಗ್ರಹವಾಗಿದ್ದ ಚಿತ್ರಗಳು ಡಿಲೀಟ್ ಆಗಿರುವ ಮಾಹಿತಿ ಬಂದಿದೆ. ಸಮಗ್ರ ಮತ್ತುನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕುಶಶಿಧರ್ ಕೋಸುಂಬೆ, ಅಧ್ಯಕ್ಷ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ
ದೇವನಹಳ್ಳಿ: ವಸತಿ ಶಾಲೆಯ ಘಟನೆ ಆಯೋಗದ ಗಮನಕ್ಕೆ ಬಂದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜತೆ ಚರ್ಚೆ ನಡೆಸಲಾಗಿದೆ. ಜಿಲ್ಲಾಡಳಿತ ಈ ಪ್ರಕರಣದ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು. ಶಾಲೆಯ ಮೇಲ್ವಿಚಾರಣೆಗೆ ತಕ್ಷಣ ಆಡಳಿತಾಧಿಕಾರಿ ನೇಮಕ ಮಾಡುವಂತೆ ಸೂಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೋಸುಂಬೆ ತಿಳಿಸಿದ್ದಾರೆ.
ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಮನೆ ನಂತರ ಅತ್ಯಂತ ಸುರಕ್ಷಿತ ಸ್ಥಳವೆಂದರೆ ಶಾಲೆ. ವಸತಿಶಾಲೆ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬುವ ಕೆಲಸ ನಡೆಯಬೇಕು. ಅವರ ಮಾನಸಿಕ ಸ್ಥಿತಿ ಹಾಗೂ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದರು.
ಡಿವಿಆರ್‌ನಲ್ಲಿ ಸಂಗ್ರಹವಾಗಿದ್ದ ಚಿತ್ರಗಳು ಡಿಲೀಟ್ ಆಗಿರುವ ಮಾಹಿತಿ ಬಂದಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಪೋಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.