ADVERTISEMENT

ದೇವನಹಳ್ಳಿ: ಸರಳ ವಿವಾಹಕ್ಕೆ ₹50 ಸಾವಿರ ಪ್ರೋತ್ಸಾಹಧನ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2025, 2:28 IST
Last Updated 14 ಸೆಪ್ಟೆಂಬರ್ 2025, 2:28 IST
   

ದೇವನಹಳ್ಳಿ: ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಪ್ರೋತ್ಸಾಹಿಸಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ₹50 ಸಾವಿರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರೋತ್ಸಾಹಧನ ಪಡೆಯಲು ಮದುವೆ ದಿನಾಂಕದ ಮೂರು ತಿಂಗಳ ಒಳಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಿಗೆ ನಿಗಧಿತ ನಮೂನೆಯಲ್ಲಿ ಮದುವೆ ಪ್ರಮಾಣ ಪತ್ರ ಮತ್ತು ಇತರೆ ಅಗತ್ಯ ದಾಖಲಾತಿ ಸಲ್ಲಿಸಬೇಕೆಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT