ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ದೇವನಹಳ್ಳಿ: ಪೋಕ್ಸೊ ಪ್ರಕರಣವೊಂದರಲ್ಲಿ ಅನುಕೂಲಕರ ದೋಷಾರೋಪಪಟ್ಟಿ ಸಲ್ಲಿಸಲು ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ₹70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಕೆಆರ್‌ಎಸ್ ಪಕ್ಷದ ಯುವ ಘಟಕದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಮಹಿಳಾ ಪಿಎಸ್‌ಐ ವಿರುದ್ಧ ತನಿಖೆಗೆ ಒತ್ತಾಯಿಸಿ ಕೆಆರ್‌ಎಸ್ ಕಾರ್ಯಕರ್ತರು ಅಧಿಕಾರಿ ಭಾವಚಿತ್ರ ಹಿಡಿದು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು.
ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದಿರುವ ಪೋಕ್ಸೊ ಪ್ರಕರಣ ಸಂತ್ರಸ್ತರ ಕುಟುಂಬದಿಂದ ಹಣ ವಸೂಲಿ ಮಾಡುವ ಅಧಿಕಾರಿಗಳಿಂದಾಗಿ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇಂತಹ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು ಎಂದು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ನಿಖಿಲ್ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.