ADVERTISEMENT

ದೇವನಹಳ್ಳಿ | ಟಿಪ್ಪರ್‌–ಬೈಕ್‌ ಡಿಕ್ಕಿ: ಮೂವರು ಯುವಕರು ಸಾವು

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 18:28 IST
Last Updated 17 ಜನವರಿ 2026, 18:28 IST
ತೌಸೀಫ್‌
ತೌಸೀಫ್‌   

ದೇವನಹಳ್ಳಿ: ತಾಲ್ಲೂಕಿನ ಅಗಲಕೋಟೆ ಬಳಿ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  

ಹೆದ್ದಾರಿಯಲ್ಲಿ ಹೊರಟಿದ್ದ ಟಿಪ್ಪರ್‌ ಹಾಗೂ ದೇವನಹಳ್ಳಿಯಿಂದ ಬೂದಿಗೆರೆ ಕಡೆಗೆ ಹೊರಟಿದ್ದ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಚಿಕ್ಕಜಾಲದ ವಿದ್ಯಾರ್ಥಿ ತೌಸೀಫ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳದಲ್ಲಿ ಮೃತಪಟ್ಟ ಬೈಕ್‌ನಲ್ಲಿದ್ದ ಉಳಿದ ಇಬ್ಬರು ಯುವಕರ ಗುರುತು ಪತ್ತೆ ಪತ್ತೆಯಾಗಿಲ್ಲ. 

ಅಪಘಾತದ ಬಳಿಕ ಚಾಲಕ ಟಿಪ್ಪರ್‌ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಮಾಹಿತಿ ಪಡೆದ ಕೂಡಲೇ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ಪರಾರಿಯಾದ ಚಾಲಕನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.