ADVERTISEMENT

ದೇವನಹಳ್ಳಿ | ಬಸ್ ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 6:53 IST
Last Updated 27 ಫೆಬ್ರುವರಿ 2026, 6:53 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ವಿಜಯಪುರ (ದೇವನಹಳ್ಳಿ): ಪಟ್ಟಣದ ಬಸ್ ನಿಲ್ದಾಣದಲ್ಲಿ ಗುರುವಾರ ಸುಮಾರು 55 ವರ್ಷದ ಅಪರಿಚಿತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ADVERTISEMENT

ಸಾರ್ವಜನಿಕರೊಬ್ಬರು ಬೆಳಿಗ್ಗೆ 11 ಗಂಟೆಗೆ ವಿಜಯಪುರ ಟೌನ್ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮೃತ ಮಹಿಳೆಯ ವಾರಸುದಾರರ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.