ADVERTISEMENT

ವಿಜಯಪುರ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಪಂಚಾಯತಿ ಸಿಇಒ ಭೇಟಿ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 2:22 IST
Last Updated 3 ಸೆಪ್ಟೆಂಬರ್ 2025, 2:22 IST
ವಿಜಯಪುರದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ಎನ್.ಅನುರಾಧ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ವಿಜಯಪುರದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ಎನ್.ಅನುರಾಧ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.   

ವಿಜಯಪುರ (ದೇವನಹಳ್ಳಿ): ಇಲ್ಲಿಯ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ  ಡಾ.ಕೆ.ಎನ್.ಅನುರಾಧ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದರು.

ಆಸ್ಪತ್ರೆಯ ವಾರ್ಡ್‌ಗಳಿಗೆ ತೆರಳಿ ಸ್ವಚ್ಛತೆ ಪರಿಶೀಲಿಸಿದ ಅವರು, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ವೈದ್ಯಕೀಯ ಸೇವೆ, ಔಷಧ ಉಪಚಾರ, ಚಿಕಿತ್ಸೆ ಮತ್ತು ಇತರ ಸೌಲಭ್ಯಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದರು.

ಚಿಕಿತ್ಸಾ ಕೊಠಡಿಯಲ್ಲಿ ವೈದ್ಯಕೀಯ ಉಪಕರಣಗಳ ಬಳಕೆ ಮಾಹಿತಿ ಪಡೆದರು. ಔಷಧಿ ಕೊಠಡಿಯಲ್ಲಿ ದಾಸ್ತಾನು ಪರಿಶೀಲನೆ ನಡೆಸಿದರು. ಆರೋಗ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT