ದೇವನಹಳ್ಳಿ: ತಾಲ್ಲೂಕಿನ ಕಾರಹಳ್ಳಿ ಸಮೀಪದ ನಂದಿಬೆಟ್ಟದ ತಪ್ಪಲಿನಲ್ಲಿ ಆಯುಷ್ ಇಲಾಖೆ ಸಹಯೋಗದಲ್ಲಿ ಶನಿವಾರ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ‘ಹಸಿರು ಯೋಗ’ ದಿನ ಆಚರಿಸಲಾಯಿತು.
ನೂರಾರು ಯೋಗಪಟುಗಳು ಯೋಗಾಸನ ಮಾಡಿದರು. ಜೂನ್ 21 ರಂದು ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೂ ಮುನ್ನ ತಿಂಗಳ ಕಾಲ ಪರಿಸರ ಸ್ನೇಹಿ ಕ್ರಮ ಮತ್ತು ಹಸಿರು ಯೋಗ ಕುರಿತು ಜನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ತಾಯಿ ಹೆಸರಿನಲ್ಲಿ ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಶ್ಯೂನ ತ್ಯಾಜ್ಯ ನಿರ್ವಹಣೆ ಕುರಿತು ಅರಿವು ಮೂಡಿಸಲಾಯಿತು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಡಾ.ಸಂಜನಾ ಜಾನ್, ಮಾಜಿ ಕುಲಪತಿ ಡಾ.ವೇಣುಗೋಪಾಲ್, ಕ್ರೀಡಾಪಟು ಮಂಜುನಾಥ್ ಹೆಗ್ಡೆ, ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನ ಅಧ್ಯಕ್ಷ ಸಿ.ಡಿ.ಕಿರಣ್ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.